ಚಳಿಗಾಲದಲ್ಲಿ ಬೆಲ್ಲವನ್ನು ಬಳಕೆ ಮಾಡುವುದದರಿ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನ ಇದೆ ಎಂದು ಹೇಳಾಗುತ್ತಿದೆ. ಅನೇಕರು ಸಿಹಿತಿಂಡಿಗಳಲ್ಲಿ ಸಕ್ಕರೆಯ ಬದಲು ಬೆಲ್ಲವನ್ನು ಬಳಸುತ್ತಾರೆ.
ಚಳಿಗಾಲದಲ್ಲಿ ಬೆಲ್ಲ ತಿಂದರೆ ಔಷಧಿ ಇದ್ದಂತೆ. ಚಳಿಗಾಲದಲ್ಲಿ ಬೆಲ್ಲ ತಿನ್ನುವುದರಿಂದ ಆಗುವ ಆರೋಗ್ಯಕಾರಿ ಲಾಭಗಳೇನು ಎಂಬುದನ್ನು ಇಲ್ಲಿ ತಿಳಿಯೋಣ.
ನಮ್ಮ ದೇಹಕ್ಕೆ ಅಗತ್ಯವಾದ ಅಂಶಗಳು ಲಭ್ಯವಿದೆ. ಇದರಲ್ಲಿ ವಿಟಮಿನ್ ಎ, ಬಿ, ಸುಕ್ರೋಸ್, ಗ್ಲೂಕೋಸ್, ಕಬ್ಬಿಣ, ಕ್ಯಾಲ್ಸಿಯಂ, ರಂಜಕ, ಪೊಟ್ಯಾಸಿಯಮ್, ಸತು, ಮೆಗ್ನೀಸಿಯಮ್ ಮುಂತಾದ ಅನೇಕ ಪೋಷಕಾಂಶಗಳಿವೆ. ಬೆಲ್ಲವು ಚಳಿಗಾಲದಲ್ಲಿ ದೇಹಕ್ಕೆ ಶಕ್ತಿವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ.
1) ಬೆಲ್ಲದಲ್ಲಿರುವ ನೈಸರ್ಗಿಕ ಸಕ್ಕರೆ ಮತ್ತು ಉತ್ಕರ್ಷಣ ನಿರೋಧಕಗಳು ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಚಳಿಗಾಲದಲ್ಲಿ ಅನೇಕ ಜನರು ಹೃದಯಾಘಾತದ ಅಪಾಯವನ್ನು ಹೊಂದಿರುತ್ತಾರೆ. ಹೀಗಿರುವಾಗ ಬೆಲ್ಲ ತಿನ್ನುವುದರಿಂದ ಹೃದಯದ ಆರೋಗ್ಯ ಸುಧಾರಿಸುತ್ತದೆ.
2) ದರಲ್ಲಿರುವ ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಕಾರಣ, ಬೆಲ್ಲವು ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಇದು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
3) ರೋಗನಿರೋಧಕ ಶಕ್ತಿ ಕಡಿಮೆಯಾದರೆ ಬೇಗ ಅನಾರೋಗ್ಯಕ್ಕೆ ತುತ್ತಾಗುತ್ತಾರೆ. ಹಾಗಾಗಿ ಪ್ರತಿದಿನ ಕನಿಷ್ಠ ಒಂದು ತುಂಡು ಬೆಲ್ಲ ತಿನ್ನುವುದನ್ನು ರೂಢಿಸಿಕೊಳ್ಳಿ.
4) ಸಕ್ಕರೆಯ ಬದಲು ಬೆಲ್ಲವನ್ನು ತಿನ್ನುವುದರಿಂದ ದೇಹದಲ್ಲಿ ಸಂಗ್ರಹವಾಗಿರುವ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ
5) ಬೆಲ್ಲದಲ್ಲಿ ಆಂಟಿಆಕ್ಸಿಡೆಂಟ್ ಅಂಶಗಳು ಮತ್ತು ಖನಿಜಾಂಶಗಳು ಹೆಚ್ಚಿನ ಪ್ರಮಾಣದಲ್ಲಿ ಇರುವುದರಿಂದ ಜೊತೆಗೆ ಜಿಂಕ್ ಮತ್ತು ಸೆಲೆನಿಯಮ್ ಅಂಶಗಳು ಕೂಡ ಇರುವುದರಿಂದ ಈ ಎಲ್ಲಾ ಅಂಶಗಳು ನಮ್ಮ ದೇಹದಲ್ಲಿ ಫ್ರೀ ರಾಡಿಕಲ್ ಗಳ ವಿರುದ್ಧ ಹೋರಾಡುವ ಆಂಟಿಆಕ್ಸಿಡೆಂಟ್ ಅಂಶಗಳಾಗಿ ಕೆಲಸ ಮಾಡುತ್ತವೆ.