ಬೆಂಗಳೂರು: ಪ್ರಸ್ತುತ ಕ್ಯಾನ್ಸರ್ ರೋಗವು ಬಹಳ ವೇಗವಾಗಿ ಹರಡುತ್ತದೆ. ಇದಕ್ಕೆ ಕಾರಣ ನಾವು ತಿನ್ನುವ ಆಹಾರ ಮತ್ತು ನಾವು ಅನುಸರಿಸುತ್ತಿರುವ ಜೀವನಶೈಲಿ ಬದಲಾವಣೆಗಳು ಎಂದು ವೈದ್ಯಕೀಯ ತಜ್ಞರು ಹೇಳುತ್ತಾರೆ. ಅದಲ್ಲದೆ ರಾಜ್ಯದಲ್ಲಿ ಅಪಾಯಕಾರಿಯಾದ ಕಾಟನ್ ಕ್ಯಾಂಡಿ ಬ್ಯಾನ್ ಮಾಡಲಾಗಿದೆ. ಇನ್ನು ಗೋಬಿ ಮಂಚೂರಿಯ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವಂತಿಲ್ಲ. ಈ ಬಗ್ಗೆ ಸುತ್ತೋಲೆ ಹೊರಡಿಸಲಾಗಿತ್ತು.
ಇದರ ಬೆನ್ನಲ್ಲೇ ಬೆಂಗಳೂರು ಜನತೆಗೆ ಶಾಕಿಂಗ್ ನ್ಯೂಸ್ ಕಾದಿದೆ. ಹಲ್ಲಿಲ್ಲದ ಚಿಕ್ಕ ಮಕ್ಕಳಿಂದ ಹಿಡಿದು ಹಲ್ಲು ಉದುರಿದ ವಯೋವೃದ್ಧರವರೆಗೆ ಎಲ್ಲರೂ ಇಷ್ಟಪಟ್ಟು ಸಲೀಸಾಗಿ ತಿನ್ನುವ ಏಕೈಕ ಆಹಾರವೆಂದರೆ ಇಡ್ಲಿ.. ಇಡ್ಲಿ ಕ್ಯಾನ್ಸರ್ಗೆ ಕಾರಣವಾಗಬಹುದು ಎಂದು ಆಹಾರ ಇಲಾಖೆಯ ಇತ್ತೀಚಿನ ವರದಿಯಿಂದ ಬೆಳಕಿಗೆ ಬಂದಿದೆ. ಬೆಂಗಳೂರಿನ ವಿವಿಧೆಡೆಗಳಿಂದ ಇಡ್ಲಿ ಮಾದರಿಗಳನ್ನು ಪಡೆದಿದ್ದ ಆಹಾರ ಇಲಾಖೆ ಅವುಗಳನ್ನು ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಿತ್ತು.
ಮರೆತೂ ಕೂಡ ಮೆಟ್ಟಿಲುಗಳ ಕೆಳಗೆ ಈ ವಸ್ತುಗಳನ್ನು ಇಡಬೇಡಿ: ಹಣದ ಸಮಸ್ಯೆ ಎದುರಾಗಬಹುದು..!
ಇದೀಗ ಪ್ರಯೋಗಾಲಯ ವರದಿ ಬಂದಿದ್ದು, 35 ಕ್ಕೂ ಹೆಚ್ಚು ಇಡ್ಲಿ ಮಾದರಿಗಳು ಅಸುರಕ್ಷಿತ ಎಂಬ ಶಾಕಿಂಗ್ ವಿಚಾರ ಬೆಳಕಿಗೆ ಬಂದಿದೆ. ಇದು, ರಸ್ತೆಬದಿಯ ಇಡ್ಲಿ ಖರೀದಿಸಿ ತಿನ್ನುವ ಮೊದಲು ಎರಡು ಬಾರಿ ಯೋಚಿಸುವಂತೆ ಮಾಡಿದೆ.
ಬೆಂಗಳೂರಿನ ಹಲವಡೆ ಇತ್ತೀಚೆಗೆ ಇಡ್ಲಿ ತಯಾರಿಸಲು ಬಟ್ಟೆಯ ಬದಲು ಪ್ಲಾಸ್ಟಿಕ್ ಕವರ್ ಬಳಕೆ ಮಾಡಲಾಗುತ್ತಿದೆ. ಇಡ್ಲಿ ಮಾಡುವಾಗ ಮಾತ್ರವಲ್ಲದೆ ಆಹಾರವನ್ನು ಬಡಿಸುವಾಗ ಮತ್ತು ಪ್ಯಾಕ್ ಮಾಡುವಾಗಲೂ ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದೆ. ಪ್ಲಾಸ್ಟಿಕ್ ಹಾಳೆಯು ಶಾಖಕ್ಕೆ ಒಡ್ಡಿಕೊಂಡು ಹಾನಿಕಾರಕ ವಸ್ತುವನ್ನು ಹೊರಸೂಸುತ್ತಿದೆ. ಇದು ಕ್ಯಾನ್ಸರ್ ಕಾರಕವಾಗಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದರು.
ತಜ್ಞರ ಎಚ್ಚರಿಕೆ ಬೆನ್ನಲ್ಲೇ ಆಹಾರ ಇಲಾಖೆ ಬೆಂಗಳೂರಿನ ಹಲವಡೆಯಿಂದ ಇಡ್ಲಿ ಮಾದರಿಗಳನ್ನು ಸಂಗ್ರಹ ಮಾಡಿದೆ. ಆಹಾರ ಹಾಗೂ ಗುಣಮಟ್ಟ ಇಲಾಖೆ ಬೆಂಗಳೂರಿನ ವಿವಿಧ ಭಾಗಗಳಲ್ಲಿ 500ಕ್ಕೂ ಹೆಚ್ಚು ಇಡ್ಲಿ ಸ್ಯಾಂಪಲ್ಸ್ ಕಲೆಕ್ಟ್ ಮಾಡಿದೆ. ಹೋಟೆಲ್ ಹಾಗೂ ತಿಂಡಿಗಳ ಅಂಗಡಿಗಳಿಂದಲೂ ಮಾದರಿ ಸಂಗ್ರಹ ಮಾಡಲಾಗಿದೆ. ಇವುಗಳಲ್ಲಿ 35 ಕ್ಕೂ ಹೆಚ್ಚು ಇಡ್ಲಿ ಸ್ಯಾಂಪಲ್ಸ್ ಅಸುರಕ್ಷಿತ ಎಂಬ ವರದಿ ಬಂದಿದೆ.