ಬೆಂಗಳೂರು: ಬಿಜೆಪಿ ಒಡಕಿನ ಚರ್ಚೆ ಆಗುವುದನ್ನು ದಾರಿ ತಪ್ಪಿಸಲು ED ಹೀಗೆ ಮಾಡಿದೆ ಎಂದು ಸಚಿವ ಡಾ.ಎಂ.ಸಿ ಸುಧಾಕರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ಅವರು ವಕ್ಫ್ ವಿಚಾರ ತಂದರು ಅದರಲ್ಲಿ ಯಶಸ್ವಿಯಾಗಲಿಲ್ಲ. ಅವರಲ್ಲಿಯೇ ಕಿತ್ತಾಟ ಶುರುವಾಗಿದೆ. ಅವರಲ್ಲಿಯೇ ಮನೆಯೊಂದು ಮೂರು ಬಾಗಿಲು ಆಗಿದೆ.
ಅವರ ಗಾಯಕ್ಕೆ ಔಷಧಿ ಹಾಕಿಕೊಳ್ಳಲು ಆಗುತ್ತಿಲ್ಲ. ಬಿಜೆಪಿ ಒಡಕಿನ ಚರ್ಚೆ ಆಗುವುದನ್ನು ದಾರಿ ತಪ್ಪಿಸಲು ಇಡಿ ಹೀಗೆ ಮಾಡಿದೆ. ಲೋಕಾಯುಕ್ತ ಮೇಲೆ ಇಡಿ ಯಾಕೆ ಪ್ರಭಾವ ಬೀರುತ್ತದೆ? ಲೋಕಾಯುಕ್ತ ಸ್ವತಂತ್ರ ಸಂಸ್ಥೆ ನೀವು ಯಾಕೆ ಪ್ರಭಾವ ಬೀರುತ್ತೀರಾ? ಇಡಿ ಅವರು ನಿಮ್ಮ ಕೆಲಸ ನೀವು ಮಾಡಿ. ಲೋಕಾಯುಕ್ತ ವರದಿ ಕೇಳಿಲ್ಲ ನೀವು ಯಾಕೆ ವರದಿ ಕೊಟ್ಟಿದ್ದೀರಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Relationship Satisfaction: ಹೆಂಡತಿಗೆ ಲೈಂಗಿಕ ಸುಖ ಸಿಕ್ಕಿದೆಯೇ ಎಂದು ತಿಳಿಯುವುದು ಹೇಗೆ ಗೊತ್ತಾ..?
ಇಡಿ ಅವರು ಯಡಿಯೂರಪ್ಪ, ಬೊಮ್ಮಾಯಿ, ಕುಮಾರಸ್ವಾಮಿ ಅವರನ್ನು ಬಿಟ್ಟು ಬಿಡಿ. ದೇವೇಗೌಡ ಕುಟುಂಬದವರು 48 ಸೈಟ್ ತೆಗೆದುಕೊಂಡಿರುವುದನ್ನ ಬಿಟ್ಟು ಬಿಡಿ. ನಿಮಗೆ ಯಾವುದು ಬೇಕೋ ಅದನ್ನು ಆಯ್ಕೆ ಮಾಡಿಕೊಂಡು ಅದರ ಬಗ್ಗೆ ಮಾತ್ರ ನೀವು ಮಾತಾಡಿ. ದೇಶದ ನ್ಯಾಯಾಲಯದ ಮೇಲೆ ನಮಗೆ ನಂಬಿಕೆ ಇದೆ. ರಾಜಕೀಯ ದುರುದ್ದೇಶದಿಂದ ಇಡಿ ಹೀಗೆ ಮಾಡುತ್ತಿದೆ. ಇದನ್ನು ನಾವು ಒಪ್ಪುವುದಿಲ್ಲ. ನಮ್ಮ ಲೀಗಲ್ ಟೀಂ ಇದನ್ನು ನೋಡುತ್ತದೆ. ಜನರ ಗಮನ ಬೇರೆಡೆಗೆ ಸೆಳೆಯಲು ಹೀಗೆ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.