ನವದೆಹಲಿ:- ನನ್ನ ಗಂಡನನ್ನು ಇಡಿ ಭಯೋತ್ಪಾದಕನಂತೆ ನಡೆಸಿಕೊಳ್ಳುತ್ತಿದ್ದಾರೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪತ್ನಿ ಸುನಿತಾ ಕೇಜ್ರಿವಾಲ್ ಆಕ್ರೋಶ ಹೊರ ಹಾಕಿದ್ದಾರೆ.
ಕೊಲ್ಕತ್ತಾ:- ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಧೀರ್ ಚೌಧರಿ ರಾಜೀನಾಮೆ..!
ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿಯ ವಿಚಾರಣಾ ನ್ಯಾಯಾಲಯ ಗುರುವಾರ ಜಾಮೀನು ನೀಡಿತ್ತು. ಆದರೆ, ಆ ಆದೇಶಕ್ಕೆ ತಡೆ ಕೋರಿ ಇಡಿ ಇಂದು ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಅದರಂತೆ ದೆಹಲಿ ಹೈಕೋರ್ಟ್ ಕೇಜ್ರಿವಾಲ್ ಜಾಮೀನಿಗೆ ತಾತ್ಕಾಲಿಕ ತಡೆ ನೀಡಿತ್ತು.
ಕೋರ್ಟ್ ಜಾಮೀನು ಆದೇಶವನ್ನು ಅಧಿಕೃತವಾಗಿ ಅಪ್ಲೋಡ್ ಮಾಡುವ ಮುನ್ನವೇ ಜಾರಿ ನಿರ್ದೇಶನಾಲಯ (ಇಡಿ) ಹೈಕೋರ್ಟ್ನ ಮೊರೆ ಹೋಗಿರುವುದಕ್ಕೆ ಸುನಿತಾ ಕೇಜ್ರಿವಾಲ್ ಇಡಿ ಕ್ರಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರು ಈಗ ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತನ್ನ ಪತಿಗೆ ನೀಡಲಾದ ಜಾಮೀನನ್ನು ಪ್ರಶ್ನಿಸುವ ಜಾರಿ ನಿರ್ದೇಶನಾಲಯದ (ಇಡಿ) ನಿರ್ಧಾರವನ್ನು ತೀವ್ರವಾಗಿ ಟೀಕಿಸಿದ್ದಾರೆ. ದಕ್ಷಿಣ ದೆಹಲಿಯ ಭೋಗಲ್ನಲ್ಲಿ ದೆಹಲಿ ಜಲ ಸಚಿವೆ ಅತಿಶಿ ಅವರು ಹರಿಯಾಣದಿಂದ ಹೆಚ್ಚಿನ ನೀರು ಪಡೆಯಲು ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ಆರಂಭಿಸಿದ ಸುನಿತಾ ಕೇಜ್ರಿವಾಲ್, ದೇಶದಲ್ಲಿ ಸರ್ವಾಧಿಕಾರವು ಎಲ್ಲಾ ಮಿತಿಗಳನ್ನು ಮೀರಿದೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು “ಮೋಸ್ಟ್ ವಾಂಟೆಡ್ ಭಯೋತ್ಪಾದಕ” ಎಂದು ಪರಿಗಣಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.