ಬೆಂಗಳೂರು: ಮುಡಾ ಕೇಸ್ನಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಕೇಳಿ ಬಂದಿರುವ ಗಂಭೀರ ಆರೋಪಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಹೌದು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.
ಜ. 23 ರಂದು ಇಡಿ ನೋಟಿಸ್ ಜಾರಿ ಮಾಡಿದ್ದ ಇಡಿ ಜ.27 ರಂದು (ಇಂದು) ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಇಂದು ಬೆಳಗ್ಗೆ ಹೈಕೋರ್ಟ್ನಲ್ಲಿ ಪಾರ್ವತಿ ಮತ್ತು ಬೈರತಿ ಸುರೇಶ್ ಅವರು ಇಡಿ ನೋಟಿಸ್ ನೀಡಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು ಮಧ್ಯಾಹ್ನ 2:30ಕ್ಕೆ ಅರ್ಜಿ ವಿಚಾರಣೆಗೆ ಬರಲಿದೆ.
Chanakya Niti: ವಿವಾಹಿತ ಪುರುಷರು ಬೇರೆ ಮಹಿಳೆಯಗೆ ಆಕರ್ಷಿತರಾಗೋದ್ಯಾಕೆ..? ಚಾಣಕ್ಯ ನೀಡಿದ 5 ಕಾರಣಗಳು ಇಲ್ಲಿದೆ
ಜ.23ರ ಬೆಳಗ್ಗೆ ಸಿಎಂ ಕುಟುಂಬಕ್ಕೆ ಲೋಕಾಯುಕ್ತದಿಂದ ಕ್ಲೀನ್ ಚಿಟ್ ಎಂದು ಸುದ್ದಿ ಹರಿದಾಡುತ್ತಿತ್ತು. ಈ ಬಗ್ಗೆ ಕೇಳಿದ ಪ್ರಶ್ನೆಗೆ ನನಗೇನೂ ಗೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಆ ಬಳಿಕ ಗುರುವಾರ ಸಂಜೆಯೇ ಸಿಎಂ ಪತ್ನಿ ಪಾರ್ವತಿ ಅವರಿಗೆ ಇಡಿ ಸಮನ್ಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು.
ಈಗಾಗಲೇ ಸಿಎಂ ಪತ್ನಿ ಅವರು ತನಗೆ ನೀಡಿದ 14 ಸೈಟ್ಗಳು ಮುಡಾಗೆ ಮರಳಿಸಿದ್ದಾರೆ. ಲೋಕಾಯುಕ್ತ, ಇಡಿಯಲ್ಲಿ ಎಫ್ಐಆರ್ ಬೆನ್ನಲ್ಲೇ ಕಳೆದ ಸೆ.30 ರಂದು 14 ನಿವೇಶನ ಹಿಂದಿರುಗಿಸುವುದಾಗಿ ಮುಡಾ ಆಯುಕ್ತರಿಗೆ ಪಾರ್ವತಿ ಅವರು ಪತ್ರ ಬರೆದಿದ್ದರು.