ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣ (Valmiki Scam) ಸಂಬಂಧ ಇಡಿ (ED) ದಾಳಿಯಿಂದ ಇನ್ನಷ್ಟು ಕರ್ಮಕಾಂಡಗಳು ಹೊರಕ್ಕೆ ಬರಲಿದೆ ಎಂದು ರಾಜ್ಯದ ಮಾಜಿ ಸಚಿವ ಬಿ.ಶ್ರೀರಾಮುಲು (B Sriramulu) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಜ್ಯ ಬಿಜೆಪಿ (BJP) ಕಚೇರಿಯಲ್ಲಿ ನಡೆದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, `ಊರು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತೆ’ ಅನ್ನೋ ತರ ಈ ಸರ್ಕಾರ ವರ್ತಿಸುತ್ತಿದೆ. ಕರ್ನಾಟಕದಲ್ಲಿ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮವನ್ನು ಬುಡಕಟ್ಟು ಸಮುದಾಯ, ಪರಿಶಿಷ್ಟ ಸಮುದಾಯಕ್ಕೆ ಆರ್ಥಿಕ ಮತ್ತು ಸಾಮಾಜಿಕವಾಗಿ ಬಲಪಡಿಸುವ ಉದ್ದೇಶದಿಂದ ರಚಿಸಲಾಗಿತ್ತು ಎಂದು ನೆನಪಿಸಿದರು.
ಇ.ಡಿ ವಶಕ್ಕೆ ಪಡೆದಾಗ ನಾಗೇಂದ್ರ ಮೊದಲ ಪ್ರತಿಕ್ರಿಯೇ ಹೇಗಿತ್ತು ಗೊತ್ತಾ?
ಬಿಜೆಪಿ ಅಧಿಕಾರಕ್ಕೆ ಬಂದಾಗೆಲ್ಲಾ ಎಸ್ಸಿ, ಎಸ್ಟಿ ಸಮುದಾಯಕ್ಕೆ ನ್ಯಾಯ ಕೊಡುವ ಕೆಲಸ ಮಾಡಿದೆ. ವಾಲ್ಮೀಕಿ ನಿಗಮದ ಹಗರಣ ಸಂಬಂಧ ಹಲವು ತಿಂಗಳಿನಿಂದ ಬಿಜೆಪಿ ಹೋರಾಟ ನಡೆದಿದೆ. ನಾಗೇಂದ್ರ ಅವರ ಮನೆಯ ಮೇಲೆ, ಆಸ್ತಿಗಳ ಮೇಲೆ ಇ.ಡಿ ದಾಳಿ ಮಾಡಿದೆ. ಅನೇಕ ದಾಖಲಾತಿಗಳ ಪರಿಶೀಲನೆ ನಡೆದಿದೆ ಎಂದು ವಿವರಿಸಿದರು.