ಶಿವಮೊಗ್ಗ:- ನ.26ರಂದು ಶಿವಮೊಗ್ಗಕ್ಕೆ ಸಚಿವ ಮಧು ಬಂಗಾರಪ್ಪ ಭೇಟಿ ನೀಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರೂ ಆದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ನವೆಂಬರ್ 26ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ.
ಸಂಜೆ 4 ಗಂಟೆಗೆ ಗದಗ ದಿಂದ ಶಿವಮೊಗ್ಗಕ್ಕೆ ಬರುವ ಅವರು, ಇಲ್ಲಿನ ಈಡಿಗರ ಭವನದಲ್ಲಿ ನಡೆಯುವ ದೀವರ ಸಾಂಸ್ಕೃತಿಕ ವೈಭವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಶಿವಮೊಗ್ಗದಲ್ಲಿಯೇ ವಾಸ್ತವ್ಯ ಹೂಡಲಿದ್ದು, ನವೆಂಬರ್ 27ರಂದು ಬೆಳಿಗ್ಗೆ 9.30ಕ್ಕೆ ಬಾಳೆಹೊನ್ನೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.