ಬೆಂಗಳೂರು:- ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಕೇಸ್ ಗೆ ಸಂಬಂಧಿಸಿದಂತೆ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ.
ಚಂದ್ರು, ವಿಶ್ವನಾಥ, ಕೃಷ್ಣಮೂರ್ತಿಗೆ ಇಂದು 32ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ದಾಳಿಕೋರರನ್ನ ಮುನಿರತ್ನ ಬೆಂಬಲಿಗರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಈ ಸಂಬಂಧ ಕೇಸ್ ದಾಖಲಿಸಿಕೊಂಡಿದ್ದ ನಂದಿನಿ ಲೇಔಟ್ ಪೊಲೀಸರು ಮೂವರು ಆರೋಪಿಗಳನ್ನ ಬಂಧಿಸಿದ್ದರು. ಇಂದು ಮೂವರು ಆರೋಪಿಗಳನ್ನು ಕೋರ್ಟ್ಗೆ ಹಾಜರುಪಡಿಸಲಾಗಿತ್ತು.
ಮೊಟ್ಟೆ ದಾಳಿ ಬಳಿಕ ನಗರದ ಕೆ.ಸಿ ಜನರಲ್ ಆಸ್ಪತ್ರೆಗೆ ದಾಖಲಾಗಿದ್ದ ಶಾಸಕ ಮುನಿರತ್ನ, ವೈದ್ಯರ ಸೂಚನೆ ಮೇರೆಗೆ ಬುಧವಾರ ರಾತ್ರಿ ಆಸ್ಪತ್ರೆಯಲ್ಲೇ ಉಳಿದಿದ್ದರು. ಗುರುವಾರ ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಯಿಂದ ಹೊರಬರುತ್ತಿದ್ದಂತೆ ಮತ್ತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ.