ಬೆಂಗಳೂರು:- ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಕೇಸ್ ಗೆ ಸಂಬಧಪಟ್ಟಂತೆ ಕಾಂಗ್ರೆಸ್ ಮುಖಂಡರ ವಿರುದ್ಧ ದೂರು ನೀಡಲಾಗಿದೆ.
Bagalakote: ಕರ್ತವ್ಯಕ್ಕೆ ನೆರವಾದ ವಾಹನ ಪೋಲೀಸ್ ಸಿಬ್ಬಂದಿಗಳಿಂದ ಅಭಿನಂದನೆ!
ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್, ಡಿಕೆ ಸುರೇಶ್, ಕುಸುಮಾ ಹಾಗೂ ಹನುಮಂತರಾಯಪ್ಪ ವಿರುದ್ಧ ಮುನಿರತ್ನ ಅವರು ದೂರು ನೀಡಿದ್ದಾರೆ. ಆದರೆ, ನಂದಿನಿ ಲೇಔಟ್ ಠಾಣೆ ಪೊಲೀಸರು ಯಾರ ಹೆಸರನ್ನೂ ಉಲ್ಲೇಖಿಸದೇ ಝೀರೋ ಎಫ್ಐಆರ್ ದಾಖಲಿಸಿದ್ದಾರೆ.
ಮುನಿರತ್ನ ನೀಡಿದ ದೂರಿನನ್ವಯ ಎಫ್ಐಆರ್ ದಾಖಲಾಗಿದೆ. ಒಳಸಂಚು ರೂಪಿಸಿ ಹಲ್ಲೆ ಮತ್ತು ಕೊಲೆ ಮಾಡುವ ಮುಂದುವರೆದ ಭಾಗವಾಗಿ ಸಂಚಿನಂತೆ ಮೊಟ್ಟೆ ಎಸೆಯಲಾಗಿದೆ ಎಂದು ದೂರು ನೀಡಿದ್ದಾರೆ.