ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿರುವ ಜೆಡಿಎಸ್ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಇಂದು ಚುನಾವಣಾ ತುರ್ತು ಸಭೆ ಜರುಗಿದೆ.
ಪರಿಷತ್ ಸದಸ್ಯ ಟಿಎ ಶರವಣ ಅವರು ಸಭೆಯಲ್ಲಿ ಭಾಗಿಯಾಗಿದ್ದು 2024 ರ ಲೋಕಸಭಾ ಚುನಾವಣೆಯ ಸಿದ್ಧತೆ ಹಾಗೂ ಸಾಧಕ ಬಾಧಕಗಳ ಕುರಿತು ಚರ್ಚೆ ಮಾಡಲಾಗಿದೆ.
ಇನ್ನೂ ಸಭೆಯಲ್ಲೂ 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು, ಬಿಬಿಎಂಪಿ ಮಾಜಿ ಸದಸ್ಯರು, ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಲು ಇಚ್ಚಿಸಿರುವ ಆಕಾಂಕ್ಷಿಗಳು ಹಾಗೂ ವಾರ್ಡ್ ಅಧ್ಯಕ್ಷರುಗಳು ಭಾಗಿಯಾಗಿದ್ದು, ಅವರ ಅಭಿಪ್ರಾಯಗಳನ್ನು ಸಂಗ್ರಹಿಸಲಾಗಿದೆ.
ಇನ್ನೂ ಜೆಡಿಎಸ್ ಬಿಜೆಪಿ ಮೈತ್ರಿಯ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಸಿ.ಎನ್.ಮಂಜುನಾಥ , ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಪಿ.ಸಿ. ಮೋಹನ್ ರವರು ಸಭೆಗೆ ಆಗಮಿಸಿದ್ದರು.
ಬಳಿಕ ಸಭೆಯಲ್ಲಿ ಮಾತನಾಡಿದ ಟಿಎ ಶರವಣ ಅವರು, ಮುಂಬರುವ ಚುನಾವಣೆ ಕುರಿತು ಪಕ್ಷದ ಕಾರ್ಯಕರ್ತರ ಜೊತೆ ಚರ್ಚೆ ಮಾಡಿದರು.