ಬೆಂಗಳೂರು: ಮುಂದಿನ ಶುಕ್ರವಾರ ಶಾಸಕಾಂಗ ಸಭೆ ನಡೆಯಲಿದ್ದು, ಈ ವೇಳೆ ವಿಪಕ್ಷ ನಾಯಕನ ಆಯ್ಕೆ ನಡೆಯಲಿದೆ ಎಂದು ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಶಾಸಕರ ಅಭಿಪ್ರಾಯ ಪಡೆದು ವಿಪಕ್ಷ ನಾಯಕನ ಆಯ್ಕೆ ಮಾಡಲಾಗುವುದು. ಮಾಜಿ ಸಿಎಂ B.S.ಯಡಿಯೂರಪ್ಪ BJP ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಜೊತೆ ಚರ್ಚೆ ಮಾಡಿದ್ದಾರೆ ಎಂದರು.
ಮಾಜಿ ಸಿಎಂ B.S.ಯಡಿಯೂರಪ್ಪನ ಮಗ ಎನ್ನುವ ಕಾರಣಕ್ಕೆ ನನಗೆ ಈ ಪೋಸ್ಟ್ ಕೊಟ್ಟಿಲ್ಲ. ಯಡಿಯೂರಪ್ಪ ಮಗ ಎನ್ನುವ ಹೆಮ್ಮೆ ಇದೆ. ಪಕ್ಷ ಬೀಡುವ ಯೋಚನೆಯಲ್ಲಿ ಇರೋರನ್ನು ಒಟ್ಟಿಗೆ ತಗೊಂಡು ಹೋಗುತ್ತೇನೆ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ B.Y.ವಿಜಯೇಂದ್ರ ತಿಳಿಸಿದ್ದಾರೆ.