ಚೆನ್ನೈ: ಕಾಂಗ್ರೆಸ್ ಸಂಸದರೂ ಆಗಿರುವ ವಯನಾಡು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ (Rahul Gandhi’s Helicopter) ಅನ್ನು ಚುನಾವಣಾ ಅಧಿಕಾರಿಗಳು ಇಂದು ತಪಾಸಣೆ ನಡೆಸಿದ್ದಾರೆ.
ಚುಣಾವಣಾ ಪ್ರಚಾರಕ್ಕಾಗಿ ತೆರಳುತ್ತಿದ್ದ ವೇಳೆ ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ಕೇಂದ್ರ ಚುನಾವಣಾ ಆಯೋಗದ (ಇಸಿಐ) ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು (Election Commission’s Flying Squad officials) ರಾಗಾ ಅವರ ಹೆಲಿಕಾಪ್ಟರ್ ಅನ್ನು ತಪಾಸಣೆ ನಡೆಸಿದರು.
#WATCH | The Helicopter through which Congress leader Rahul Gandhi arrived in Nilgiris, Tamil Nadu was checked by the Election Commission's Flying Squad officials in Nilgiris.
(Video source: Election Commission Flying Squad) pic.twitter.com/aSOoNxyUJB
— ANI (@ANI) April 15, 2024
ಅಧಿಕಾರಿಗಳ ತಪಾಸಣೆಗೆ ಸಹಕರಿಸಿದ ರಾಹುಲ್ ಗಾಂಧಿ, ಬಳಿಕ ತಮ್ಮ ಸಂಸದೀಯ ಕ್ಷೇತ್ರ ವಯನಾಡಿನ ಸುಲ್ತಾನ್ ಬತ್ತೇರಿಯಲ್ಲಿ ಬೃಹತ್ ರೋಡ್ ಶೋ (Rahul Gandhi Road Show) ನಡೆಸಿದರು. ಇದಕ್ಕೂ ಮುನ್ನ ನೀಲಗಿರಿ ಜಿಲ್ಲೆಯಲ್ಲಿನ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದದಲ್ಲಿಯೂ ಪಾಲ್ಗೊಂಡರು.
ಬಿಜೆಪಿ ಪ್ರಣಾಳಿಕೆ ವಿರುದ್ಧ ವಾಗ್ದಾಳಿ:
ಒಂದು ದಿನದ ಹಿಂದೆಯಷ್ಟೇ ರಾಹುಲ್ ಗಾಂಧಿ ಬಿಜೆಪಿ ಪ್ರಣಾಳಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದರು. ಬಿಜೆಪಿ ಪಕ್ಷವು ಪ್ರಣಾಳಿಕೆಯಲ್ಲಿ ನಿರುದ್ಯೋಗ ಮತ್ತು ಹಣದುಬ್ಬರವನ್ನು ನಿರ್ಲಕ್ಷಿಸಿದೆ. ಪ್ರಣಾಳಿಕೆ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಹಣದುಬ್ಬರ ಮತ್ತು ನಿರುದ್ಯೋಗ ಬಿಜೆಪಿಯ ಪ್ರಣಾಳಿಕೆಯಿಂದ ಕಾಣೆಯಾಗಿದೆ ಎಂದು ಹೇಳಿದ್ದರು.