ಹಾಸನ : ಹಾಸನ ಸೇರಿದಂತೆ ಚಿಕ್ಕಮಗಳೂರು ಮತ್ತು ಮೂಡಿಗೆರೆಯಲ್ಲಿ ಕಾಡಾನೆಗಳ ಹಾವಳಿಯಿಂದ ಪ್ರತಿನಿತ್ಯ ಸಾವು ನೋವುಗಳು ಸಂಭವಿಸುತ್ತಿದ್ದು, ಈ ಸಂಬಂಧ ಶೀಘ್ರದಲ್ಲೇ ಬೆಂಗಳೂರಿನಲ್ಲಿ ಸಭೆ ಕರೆದು ಚರ್ಚೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಅಭಿವೃದ್ಧಿ ಕುರಿತು ಸಭೆ ನಡೆಸಿ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು,
ಕಾಡು ಪ್ರಾಣಿಗಳು ಮತ್ತು ಮನುಷ್ಯರ ಸಂಘರ್ಷ ಹೆಚ್ಚಾಗುತ್ತಿದೆ ಇದಕ್ಕೆ ಪ್ರಮುಖ ಕಾರಣ ಅರಣ್ಯ ಒತ್ತುವರಿಯಾಗಿರುವುದರಿಂದ ಪ್ರಾಣಿಗಳು ನಾಡಿಗೆ ಬರುತ್ತಿವೆ, ಅಲ್ಲದೆ ಕಾಡಿನಲ್ಲಿ ಆಹಾರ ಸಿಗದೇ ಊರಿಗೆ ಆಗಮಿಸುತ್ತಿವೆ,
Winter Health: ಚಳಿಗಾಲದಲ್ಲಿ ಗಂಟಲು ನೋವು, ಕೆಮ್ಮು ಸಮಸ್ಯೆಯೇ?: ಈ ವಸ್ತುಗಳನ್ನ ತಯಾರಿಸಿ ಟೀ ಕುಡಿದು ನೋಡಿ!
ಇದನ್ನು ತಡೆಗಟ್ಟಲು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುವುದೆಂದು ಹೇಳಿದರು. ಜಿಲ್ಲೆಯಲ್ಲಿ ಹೆಚ್ಚಾಗಿರುವ ಕಾಡಾನೆಯಿಂದ ಮನುಷ್ಯನ ಪ್ರಾಣಹಾನಿ ಸಂಭವಿಸುತ್ತಿದ್ದು, ಈ ಬಗ್ಗೆ ಶೀಘ್ರದಲ್ಲಿಯೇ ಬೆಂಗಳೂರಿನಲ್ಲಿ ಸಭೆ ಕರೆದು ಚರ್ಚಿಸಿ, ಶ್ರೀಲಂಕಾ ಮಾದರಿಯಲ್ಲಿ ಆನೆ ಕ್ಯಾಂಪ್ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಭರವಸೆ ನೀಡಿದರು.