ಶಿವಮೊಗ್ಗ: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ತೀವ್ರ ವಾಗ್ದಾಳಿ ನಡೆಸಿದ್ದು, ಅವರನ್ನು ಮಾಸ್ ರೇಪಿಸ್ಟ್ ಎಂದು ಕರೆದಿದ್ದಾರೆ. ಶಿವಮೊಗ್ಗದ ಫ್ರೀಡಂ ಪಾರ್ಕ್ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಅವರು ಪ್ರಚಾರ ನಡಸಿದರು. ಈ ವೇಳೆ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ ದೇಶದ ಗಮನ ಸೆಳೆದಿದೆ. ನೂರಾರು ಜನ ಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿದ್ದಾರೆ.
ಇದು ಕೇವಲ ಅತ್ಯಾಚಾರ ಅಷ್ಟೇ ಅಲ್ಲ, ಬದಲಿಗೆ ಇದು ಸಮೂಹ ಅತ್ಯಾಚಾರವಾಗಿದೆ. ಈ ಪ್ರಕರಣ ಬಿಜೆಪಿಯವರಿಗೆ ಗೊತ್ತಿತ್ತು. ಆದರೂ ಪ್ರಧಾನಿ ಆದಿಯಾಗಿ ಆ ಪಕ್ಷದ ಮುಖಂಡರು ಪ್ರಜ್ವಲ್ ರೇವಣ್ಣ ಪರ ಮತ ಯಾಚಿಸಿದ್ದಾರೆ. ಒಬ್ಬ ಮಾಸ್ ರೇಪಿಸ್ಟ್ ಪರ ಪ್ರಧಾನಿ ಮತ ಯಾಚಿಸಿರುವುದು ಇಡೀ ಜಗತ್ತಿಗೆ ಗೊತ್ತಾಗಿದೆ ಎಂದು ಅವರು ಕಿಡಿಕಾರಿದ್ದಾರೆ. ಪ್ರಧಾನಿ ಮೋದಿಯವರು ಪ್ರಜ್ವಲ್ ಪ್ರಕರಣವನ್ನು ಸಮರ್ಥನೆ ಮಾಡಿಕೊಳ್ಳುತ್ತಾರೆ. ಅವರ ಜೊತೆಗೆ ಮೋದಿ ವೇದಿಕೆಯಲ್ಲಿ ಪ್ರಚಾರ ಮಾಡಿದ್ದಾರೆ.
ಉದ್ಯೋಗ ಆಕಾಂಕ್ಷಿಗಳೇ ಗಮನಿಸಿ.. BBMPಯಲ್ಲಿ 11,307 ಗ್ರೂಪ್ ಡಿ ಹುದ್ದೆಗಳು ಖಾಲಿ ಇದೆ..! ಇಂದೇ ಅರ್ಜಿ ಸಲ್ಲಿಸಿ
ಇದೇ ಬಿಜೆಪಿಯವರ ಸಂಸ್ಕøತಿಯಾಗಿದೆ. ಬಿಜೆಪಿಯವರು ಅಧಿಕಾರಕ್ಕಾಗಿ ಏನು ಬೇಕಾದರು ಮಾಡಲು ತಯಾರಾಗಿದ್ದಾರೆ. ಮಾಸ್ ರೇಪಿಸ್ಟ್ ವಿದೇಶಕ್ಕೆ ಒಡಿಹೋಗಲು ಅನುವು ಮಾಡಿಕೊಟ್ಟಿದ್ದಾರೆ. ಸಿಬಿಐಗೆ ಎಲ್ಲಾ ಅಧಿಕಾರ ಇದ್ದರೂ ಪ್ರಜ್ವಲ್ ರೇವಣ್ಣರನ್ನು ವಿದೇಶಕ್ಕೆ ಹೋಗಲು ಬಿಟ್ಟಿದ್ದಾರೆ. ಇದೇ ಮೋದಿಯ ಗ್ಯಾರಂಟಿ. ಮೋದಿ, ಅಮಿತ್ ಶಾ ದೇಶದ ಜನತೆಯ ಕ್ಷಮೆ ಕೇಳಬೇಕು ಎಂದು ಅವರು ಆಗ್ರಹಿಸಿದ್ದಾರೆ.