ಆನೇಕಲ್: ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ ಗ್ರಾಮದ ಹರ್ಷಿತಾ(18) ಮೃತ ವಿದ್ಯಾರ್ಥಿನಿ. ಗುರುವಾರ ರಾತ್ರಿ ಹಾಸ್ಟೆಲಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ.
ಆಕೆಯನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಹಾಸ್ಟೆಲ್ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಇದು ಆತ್ಮಹತ್ಯೆಯೋ? ಕೊಲೆಯೋ ಎನ್ನುವುದು ತಿಳಿದು ಬರಬೇಕಿದೆ.