ನಾಳೆ ನಡೆಯುವ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡವು ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ.
ಜಾಸ್ತಿ ಕಾಫಿ ಕುಡಿಯೋ ಅಭ್ಯಾಸ ಇದ್ಯಾ!?.. ಈ ಸಮಸ್ಯೆ ಬರಬಹುದು ಹುಷಾರ್…!
ಟೀಂ ಇಂಡಿಯಾ ಪಂದ್ಯದ ಬಗ್ಗೆ ಹೇಳುವುದಾದರೆ.. ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೂರ್ನಿಯ ಎರಡನೇ ಸೆಮಿಫೈನಲ್ ಪಂದ್ಯ ನಾಳೆ ರಾತ್ರಿ 8 ಗಂಟೆಗೆ (ಭಾರತೀಯ ಕಾಲಮಾನ) ಆರಂಭವಾಗಲಿದೆ. ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂ ಈ ಪಂದ್ಯಕ್ಕೆ ಆತಿಥ್ಯವಹಿಸುತ್ತಿದೆ. ಆದರೆ ಕಳೆದ ಕೆಲವು ಪಂದ್ಯಗಳಂತೆ ನಾಳಿನ ಪಂದ್ಯಕ್ಕೂ ಮಳೆ ಅಡ್ಡಿಪಡಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
ಹವಾಮಾನ ವೆಬ್ಸೈಟ್ ಅಕ್ಯೂವೆದರ್ ಪ್ರಕಾರ, ಪಂದ್ಯದಲ್ಲಿ ಮಳೆಯಾಗುವ ಎಲ್ಲಾ ಸಾಧ್ಯತೆಗಳಿವೆ. ವೆಬ್ಸೈಟ್ ವರದಿಯ ಪ್ರಕಾರ, ಗಯಾನಾದಲ್ಲಿ ಬೆಳಿಗ್ಗೆ 10 ಗಂಟೆಗೆ ಭಾರಿ ಮಳೆಯ ಮುನ್ಸೂಚನೆ ಇದೆ. ಪಂದ್ಯದ ಸಮಯ ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಇದೆ. ಈ ಅವಧಿಯಲ್ಲಿ ಶೇ.35ರಿಂದ 70 ರಷ್ಟು ಮಳೆಯಾಗುವ ಸಾಧ್ಯತೆ ಇದೆ. ಮಳೆಯಿಂದಾಗಿ ಪಂದ್ಯ ತಡವಾಗಿ ಆರಂಭವಾಗಬಹುದು. ವರದಿ ಪ್ರಕಾರ ದಿನವಿಡೀ ಮೋಡ ಕವಿದ ವಾತಾವರಣ ಇರಲಿದೆ. ಭಾರೀ ಮಳೆಯಾಗುವ ಸಾಧ್ಯತೆ ಇಲ್ಲದಿದ್ದರೂ ಮಳೆಯಾಗುವ ಸಾಧ್ಯತೆ ಇದೆ. ಆದರೆ ವೆಸ್ಟ್ ಇಂಡೀಸ್ನಲ್ಲಿ ಉತ್ತಮವಾದ ಒಂದು ವಿಷಯವೆಂದರೆ ಮಳೆ ನಿಂತ 10 ನಿಮಿಷಗಳಲ್ಲಿ ಪಂದ್ಯ ಪ್ರಾರಂಭವಾಗುತ್ತಿದೆ.
ಟಿ20 ಕ್ರಿಕೆಟ್ನಲ್ಲಿ ಉಭಯ ತಂಡಗಳು 23 ಬಾರಿ ಮುಖಾಮುಖಿಯಾಗಿದ್ದು, ಇದರಲ್ಲಿ ಭಾರತವೇ ಮೇಲುಗೈ ಸಾಧಿಸಿದೆ. ಟೀಂ ಇಂಡಿಯಾ 12 ಪಂದ್ಯಗಳನ್ನು ಗೆದ್ದಿದ್ದರೆ, ಇಂಗ್ಲೆಂಡ್ 11 ಪಂದ್ಯಗಳಲ್ಲಿ ಗೆಲುವಿನ ರುಚಿ ಕಂಡಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)