ಮೊಣಕಾಲು ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಇಂಗ್ಲೆಂಡ್ ನ ಅನುಭವಿ ಸ್ಪಿನ್ನರ್ ಜ್ಯಾಕ್ ಲೀಚ್ ದ್ವಿತೀಯ ಟೆಸ್ಟ್ ಪಂದ್ಯದಿಂದ ಹೊರನಡೆದಿದ್ದು ತಂಡಕ್ಕೆ ಆರಂಭಿಕ ಆಘಾತ ಉಂಟಾಗಿದೆ.
ಸ್ಕೈ ಸ್ಪೋರ್ಟ್ಸ್ ಜೊತೆ ಸಂವಾದ ನಡೆಸಿರುವ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್, “ಇಂಗ್ಲೆಂಡ್ ನ ಅನುಭವಿ ಸ್ಪಿನ್ನರ್ ಜ್ಯಾಕ್ ಲೀಚ್ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಅವರು ಮೊಣಕಾಲಿನ ಗಾಯದ ಸಮಸ್ಯೆಯಿಂದ ಚೇತರಿಸಿಕೊಳ್ಳುತ್ತಿದ್ದಾರೆ” ಎಂದು ಹೇಳಿದ್ದಾರೆ.
“ಲೀಚ್ ತಂಡದಿಂದ ಹೊರ ಬಿದ್ದಿರುವುದು ನಿಜಕ್ಕೂ ಇಂಗ್ಲೆಂಡ್ ತಂಡಕ್ಕೆ ದೊಡ್ಡ ಅವಮಾನವಾಗಿದೆ. ಆತ(ಜ್ಯಾಕ್ ಲೀಚ್) ನಿಗೂ ತಲೆತಗ್ಗಿಸುವಂತಹ ವಿಷಯವಾಗಿದೆ. ಆದರೆ ನಾವು ಫಿಸಿಯೋ ಹಾಗೂ ವೈದ್ಯರ ತಂಡದೊಂದಿಗೆ ಸತತ ಸಂಪರ್ಕದಲ್ಲಿದ್ದೇವೆ. ಅಲ್ಲದೆ ಗಾಯದ ಸಮಸ್ಯೆಯು ಗಂಭೀರ ಸ್ವರೂಪವಾಗಿಲ್ಲದ ಕಾರಣ ಆತ ಶೀಘ್ರವೇ ತಂಡವನ್ನು ಕೂಡಿಕೊಳ್ಳಲಿದ್ದಾರೆ” ಎಂದು ಬೆನ್ ಸ್ಟೋಕ್ಸ್ ಹೇಳಿದ್ದಾರೆ.
ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನ್ನಿಂಗ್ಸ್ ನ 26ನೇ ಓವರ್ ನಲ್ಲಿ ಜ್ಯಾಕ್ ಲೀಚ್ ಅವರು ಗಾಯಗೊಂಡಿದ್ದು ಅವರಿಗೆ ಹೆಚ್ಚಾಗಿ ಬೌಲ್ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಬೌಲಿಂಗ್ ಕೋಚ್ ಜಿತೇನ್ ಪಟೇಲ್ ತಿಳಿಸಿದ್ದಾರೆ.
ಇಂಗ್ಲೆಂಡ್ ನ ಅನುಭವಿ ಸ್ಪಿನ್ನರ್ ಜ್ಯಾಕ್ ಲೀಚ್ ಅವರು ದ್ವಿತೀಯ ಟೆಸ್ಟ್ ಪಂದ್ಯದಿಂದ ಹೊರ ನಡೆದಿದ್ದು ಯಂಗ್ ಸ್ಪಿನ್ನರ್ ಶೋಯಿಬ್ ಬಶೀರ್ ಸ್ಥಾನ ಪಡೆಯುವ ಸಾಧ್ಯತೆಗಳಿವೆ. ವೀಸಾ ತೊಂದರೆಯಿಂದಾಗಿ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡುವ ಅವಕಾಶ ತಪ್ಪಿಸಿಕೊಂಡಿದ್ದ ಬಶೀರ್, ಹೈದರಾಬಾದ್ ನಲ್ಲೇ ತಂಡವನ್ನು ಕೂಡಿಕೊಂಡಿದ್ದರು.