ಬಂಗಾರಪೇಟೆ : ಕನ್ನಡಜ್ಯೋತಿ ಹೊತ್ತ ಕನ್ನಡ ರಥಯಾತ್ರೆಯು 87 ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕೋಲಾರ ನಗರದಿಂದ ಮೆರವಣಿಗೆಯ ಮೂಲಕ ಬಂಗಾರಪೇಟೆ ತಾಲ್ಲೂಕಿನ ಹಂಚಾಳಗೇಟ್ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ಹೆಬ್ಬಾಗಿಲಿನಲ್ಲಿ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಚಂದ್ರಶೇಖರ್, ಆಡಳಿತಾಧಿಕಾರಿಗಳು, ಶಾಲಾಭಿವೃದ್ದಿ ಸಮಿತಿ ಉಪನ್ಯಾಸಕ ವೃಂದ ಮತ್ತು ಸುಮಾರು 2000 ವಿದ್ಯಾರ್ಥಿಗಳು ಕಳಶಗಳನ್ನು ಹೊತ್ತು ವಾದ್ಯಗೋಷ್ಠಿಯೊಂದಿಗೆ ಕನ್ನಡ ರಥವನ್ನು ಬರಮಾಡಿಕೊಂಡು, ಜಯಘೋಷಗಳೊಂದಿಗೆ ಕನ್ನಡಾಂಬೆ ಭುವನೇಶ್ವರಿಗೆ ಪುಷ್ಪ ನಮನವನ್ನು ಸಲ್ಲಿಸಿದರು.
ನ್ಯಾ.ಡಿ.ಕುನ್ಹಾ ಬಗ್ಗೆ ವಿವಾದಾತ್ಮಕ ಹೇಳಿಕೆ ಆರೋಪ; ಕ್ಷಮೆಯಾಚಿಸಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ!
ಈ ಸಂದರ್ಭದಲ್ಲಿ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಕೆ.ಎಂ.ರಥಯಾತ್ರೆಯ ಸಾರಥ್ಯವನ್ನು ವಹಿಸಿದ್ದರು. ಈ ಸಂದರ್ಭದಲ್ಲಿ ಅಧ್ಯಕ್ಷ ಡಾ.ಎಂ.ಚಂದ್ರಶೇಖರ್ ಮಾತನಾಡಿ, ಕನ್ನಡಾಂಬೆಗೆ ಜಯಘೋಷಗಳನ್ನು ಕೂಗುವುದರೊಂದಿಗೆ ನೆರೆದಿದ್ದ ಜನಸಮೂಹಕ್ಕೆ ಕನ್ನಡದ ಕಂಪು, ಇತಿಹಾಸ, ಕನ್ನಡ ಕವಿಗಳು, ಕನ್ನಡ ಕವಿಗಳ ಕೊಡುಗೆ, ಭಾಷಾವಾರು ಪ್ರಾಂತ್ಯಗಳ ರಚನೆಯಿಂದಾಗಿ ಹೈದರಾಬಾದ್, ಮದ್ರಾಸ್ ಮತ್ತು ಮುಂಬೈ ಪ್ರಾಂತ್ಯಗಳಲ್ಲಿ ಹಂಚಿಹೋಗಿದ್ದ ಕನ್ನಡ ಭಾಷಿಕರ ಪ್ರದೇಶಗಳನ್ನು ಒಟ್ಟುಗೂಡಿಸಿ ಕರ್ನಾಟಕ ರಾಜ್ಯ ಉದಯವಾಗಿದ್ದು ಮತ್ತು ಹುಯಿಲಗೋಳ ನಾರಾಯಣರಾಯರ ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು ಮುಂತಾದ ವಿಚಾರಗಳನ್ನು ಹಂಚಿಕೊಂಡರು.