ಬೆಂಗಳೂರು: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಕೊರೋನಾ ಕೇಸ್ ಗಳ ಸಂಕ್ಯೆ ಏರಿಕೆಯಾಗುತ್ತಿದೆ. ರಾಜ್ಯದಲ್ಲಿ 500 ಕ್ಕೂ ಹೆಚ್ಚು ಕೇಸ್ ಗಳು ಪತ್ತೆಯಾಗಿದ್ದು, ಕೊರೋನಾ 3 ನೇ ಅಲೆ ರಾಜ್ಯಕ್ಕೆ ಎಂಟ್ರಿ ಕೊಟ್ಟೇ ಬಿಡ್ತಾ ಎಂಬ ಆತಂಕ ಎದುರಾಗಿದೆ. ನಿನ್ನೆ ರಾಜ್ಯದಲ್ಲಿ 566 ಹೊಸ ಕೊರೋನಾ ಕೇಸ್ ಗಳು ಪತ್ತೆಯಾಗಿವೆ. 80 ದಿನಗಳ ಬಳಿಕ ರಾಜ್ಯದಲ್ಲಿ 500 ಕ್ಕೂ ಹೆಚ್ಚು ಕೇಸ್ ಗಳು ಪತ್ತೆಯಾಗಿವೆ. ಅದರಲ್ಲೂ ಬೆಂಗಳೂರಿನಲ್ಲಿ 400 ಕೊರೋನಾ ಕೇಸ್ ಗಳು ಪತ್ತೆಯಾಗಿವೆ.
ಬೆಂಗಳೂರಿನಲ್ಲಿ ಇಂದು 4 ಜನರು ಕೊರೋನಾದಿಂದ ಮೃತಪಟ್ಟಿದ್ದರೆ, ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 6 ಇದೆ. ಕೊರೋನಾದಿಂದ 245 ಜನರು ಗುಣಮುಖರಾಗಿದ್ದರೆ, ರಾಜ್ಯದಲ್ಲಿ ಪ್ರಸ್ತುತ 7,771 ಸಕ್ರಿಯ ಕೇಸ್ ಗಳಿವೆ. ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ದರ ಶೇ. 0.52 ರಷ್ಟಿದೆ. ಸಾವಿನ ಪ್ರಮಾಣ ಶೇ. 1.06 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
