ಉತ್ತರಾಖಂಡವು ಏಕರೂಪ ನಾಗರಿಕ ಸಂಹಿತೆ (UCC) ಜಾರಿಗೆ ತಂದ ಭಾರತದ ಮೊದಲ ರಾಜ್ಯವಾಗಿದೆ. ಇದು ದೇಶದ ಕಾನೂನು ಭೂದೃಶ್ಯದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುತ್ತದೆ. ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ದತ್ತು ಮುಂತಾದ ವಿಷಯಗಳನ್ನು ಪರಿಹರಿಸುವ ಮೂಲಕ ಸಮುದಾಯಗಳಾದ್ಯಂತ ವೈಯಕ್ತಿಕ ಕಾನೂನುಗಳನ್ನು ಪ್ರಮಾಣೀಕರಿಸುವ ಗುರಿಯನ್ನು UCC ಹೊಂದಿದೆ.
Periods: ಮಹಿಳೆಯರೇ ಗಮನಿಸಿ.. ಮುಟ್ಟಿನ ಸಮಯದಲ್ಲಿ ಮೊಸರು ತಿನ್ನಬಹುದೇ..? ಇಲ್ಲಿದೆ ಮಾಹಿತಿ
ತಂತ್ರ್ಯಾನಂತರದಲ್ಲಿ ರಾಜ್ಯವೊಂದು ಇಂಥ ಕಾಯ್ದೆ ಜಾರಿಗೊಳಿಸುತ್ತಿರುವುದು ಇದೇ ಮೊದಲು. ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳ ಪೈಕಿ ಒಂದಾದ ಈ ಕಾಯ್ದೆಯನ್ನು ಇದೀಗ ಬಿಜೆಪಿ ಆಡಳಿತದ ರಾಜ್ಯವಾದ ಉತ್ತರಾಖಂಡದಲ್ಲಿ ಜಾರಿ ಮಾಡಲಾಗುತ್ತಿದೆ. ಹೊಸ ಕಾಯ್ದೆ ಹೇಗಿರಬೇಕು ಈಗಾಗಲೇ ನಿರ್ಧರಿಸಲಾಗಿದ್ದು, ಅದರ ಜಾರಿಯ ಕುರಿತು ಈಗಾಗಲೇ ರಾಜ್ಯ ಸರ್ಕಾರ ಅಧಿಕಾರಿಗಳಿಗೆ ತರಬೇತಿ ನೀಡಿದೆ.
ಕಾಯ್ದೆಯಲ್ಲಿ ಏನಿದೆ?: ಮದುವೆಯಂತೆ ಲಿವ್-ಇನ್ ಸಂಬಂಧ ನೋಂದಣಿ ಕಡ್ಡಾಯವಾಗಲಿದೆ. ಇದು ಉತ್ತರಾಖಂಡದಲ್ಲಿ ನೆಲೆಸಿರುವ ಅಥವಾ ಅನ್ಯ ರಾಜ್ಯಗಳಲ್ಲಿ ನೆಲೆಸಿರುವ ಉತ್ತರಾಖಂಡ ಮೂಲದವರಿಗೆ ಅನ್ವಯ. ಇದರಡಿ, ಇಬ್ಬರ ಹೆಸರು, ವಯಸ್ಸಿನ ಸಾಕ್ಷಿ, ದೇಶ, ಧರ್ಮ, ಹಿಂದಿನ ಸಂಬಂಧ, ಸಂಪರ್ಕ ಸಂಖ್ಯೆ ಕುರಿತ ಮಾಹಿತಿಯನ್ನು ಹಂಚಿಕೊಳ್ಳಬೇಕು. ಇಂತಹ ಸಂಬಂಧದಿಂದ ಮಗು ಜನಿಸಿದರೆ, ಜನನ ಪ್ರಮಾಣ ಪತ್ರ ದೊರೆತ 7 ದಿನಗಳೊಳಗಾಗಿ ನೋಂದಣಿ ಕಡ್ಡಾಯ.
ಉಯಿಲಿನ ಸಾಕ್ಷಿಗಳ ವಿಡಿಯೋ ಕಡ್ಡಾಯ: ಉಯಿಲು ಬರೆಯುವವರು ತಮ್ಮ ಹಾಗೂ ಉತ್ತರಾಧಿಕಾರಿಯ ಆಧಾರ್ ಮಾಹಿತಿ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ನೀಡಬೇಕು. ಜತೆಗೆ, 2 ಸಾಕ್ಷಿಗಳು ಉಯಿಲು ಪತ್ರವನ್ನು ಓದುವ ವಿಡಿಯೋವನ್ನೂ ಅಪ್ಲೋಡ್ ಮಾಡಬೇಕು.
ಚುನಾವಣಾ ಭರವಸೆ: 2022ರ ವಿಧಾನಸಭಾ ಚುನಾವಣೆಯಲ್ಲೇ ಬಿಜೆಪಿಯು ಏಕರೂಪ ನಾಗರಿಕ ಸಂಹಿತೆ ಜಾರಿಗೆ ಸಂಬಂಧಿಸಿ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು. ರಾಜ್ಯದಲ್ಲಿ ಎರಡನೇ ಬಾರಿಗೆ ಪಕ್ಷ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ಈ ಕಾಯ್ದೆಯನ್ನು ಇದೀಗ ಜಾರಿಗೆ ತರಲಾಗುತ್ತಿದೆ.
2022ರಲ್ಲಿ ಧಾಮಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಸ್ವೀಕರಿಸಿದ ಬೆನ್ನಲ್ಲೇ ಏಕರೂಪ ನಾಗರಿಕ ಸಂಹಿತೆ ಕಾಯ್ದೆ ಜಾರಿಗೆ ಸಂಬಂಧಿಸಿ ತಜ್ಞರ ಸಮಿತಿಯನ್ನು ರಚಿಸಿದ್ದರು. ನಿವೃತ್ತ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ರಂಜನ್ ಪ್ರಕಾಶ್ ದೇಸಾಯಿ ನೇತತ್ವದ ಸಮಿತಿಗೆ ಏಕರೂಪ ನಾಗರಿಕ ಸಂಹಿತೆಗೆ ಸಂಬಂಧಿಸಿದ ಕರಡು ಸಿದ್ಧಪಡಿಸುವ ಜವಾಬ್ದಾರಿ ನೀಡಲಾಗಿತ್ತು. ಈ ಸಮಿತಿಯು ನಾಲ್ಕು ಅಧ್ಯಾಯಗಳಲ್ಲಿ ಕರಡು ಕಾಯ್ದೆ ರಚಿಸಿ ಕಳೆದ ವರ್ಷ ಫೆಬ್ರವರಿಯಲ್ಲಿ ಸರ್ಕಾರಕ್ಕೆ ಒಪ್ಪಿಸಿತ್ತು.
ಆ ಬಳಿಕ ಈ ಕಾನೂನು ಜಾರಿಗೆ ಅಗತ್ಯವಿರುವ ನಿಯಮಾವಳಿ ರೂಪಿಸಲು ಮಾಜಿ ಮುಖ್ಯಕಾರ್ಯದರ್ಶಿ ಶತ್ರುಘ್ನ ಸಿಂಗ್ ಅವರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಲಾಗಿದ್ದು, ಕಳೆದ ವರ್ಷವೇ ಇದು ತನ್ನ ವರದಿಯನ್ನು ಸರ್ಕಾರಕ್ಕೆ ನೀಡಿತ್ತು. ಈ ಕಾಯ್ದೆಗೆ ರಾಷ್ಟ್ರಪತಿಗಳ ಅಂಕಿತವೂ ಬಿದ್ದಿದ್ದು, ಸೋಮವಾರದಿಂದ ಜಾರಿಗೆ ಬರಲಿದೆ. ಉತ್ತರಾಖಂಡದಲ್ಲಿ ಈ ಕಾಯ್ದೆ ಜಾರಿಯಾದ ಬಳಿಕ ಬಿಜೆಪಿ ಆಡಳಿತವಿರುವ ಅಸ್ಸಾಂ ಸೇರಿ ವಿವಿಧ ರಾಜ್ಯಗಳೂ ಏಕರೂಪ ನಾಗರಿಕ ಸಂಹಿತೆ ಜಾರಿಯಾಗುವ ನಿರೀಕ್ಷೆ ಇದೆ. ಈಗಾಗಲೇ ಅಸ್ಸಾಂ ಸೇರಿ ಹಲವು ರಾಜ್ಯಗಳು ಈ ಕುರಿತು ಆಸಕ್ತಿ ತೋರಿವೆ.