ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಕಾವೇರಿಪುರ ವಾರ್ಡ್ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿಗಳನ್ನು ಸಚಿವ ವಿ ಸೋಮಣ್ಣ ಪರಿಶೀಲನೆ ನಡೆಸಿದರು. ಬಿಬಿಎಂಪಿ ಅಧಿಕಾರಿಗಳ ಜೊತೆ ವಿವಿಧ ಯೋಜನೆಯ ಅಭಿವೃದ್ದಿ ಕಾಮಗಾರಿಗಳನ್ನು ಪರಿವೀಕ್ಷಣೆ ನಡೆಸಿದರು. ಈ ವೇಳೆ ಮಾತನಾಡಿ ಕಾಮಗಾರಿ ಪ್ರಗತಿಯತ್ತ ಸಾಗುತ್ತಿದೆ, ಇದೇ ರೀತಿ ಕೆಲಸಗಳು ವಿಳಂಬವಾಗದಂತೆ ಸಾಗಲಿ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಬಿಬಿಎಂಪಿ ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
