ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟ ಒಬ್ಬರನ್ನೂ ಪೊಲೀಸರು ಬಿಡದೇ ವಿಚಾರಣೆಗೆ ಒಳಪಡಿಸಿದ್ದಾರೆ. ಎಲ್ಲಾ ಆಯಾಮಗಳಲ್ಲೂ ಮಾಹಿತಿ ಕಲೆ ಹಾಕಿರುವ ಪೊಲೀಸರು ತನಿಖೆಯನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಎ1 ಪವಿತ್ರಾ ಸ್ನೇಹಿತೆಗೂ ಸಂಕಷ್ಟ ಎದುರಾಗಿದೆ. ಇತ್ತೀಚೆಗೆ ಸಮತಾ ಅವರು ಜೈಲಿನಲ್ಲಿ ದರ್ಶನ್ ಹಾಗೂ ಪವಿತ್ರಾ ಅವರನ್ನು ಭೇಟಿಯಾಗಿ ಬಂದಿದ್ದರು. ಇದಾದ ಬಳಿಕ ಪೊಲೀಸರು ಸಮತಾ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಿದ್ದು ಆಡುಗೋಡಿಯ ಟೆಕ್ನಿಕಲ್ ಸೆಲ್ನಲ್ಲಿ 3 ಗಂಟೆಗಳ ಕಾಲ ಸುಮಾರು 30 ಪ್ರಶ್ನೆಗಳನ್ನ ಕೇಳಿ ತೀವ್ರ ವಿಚಾರಣೆ ನಡೆಸಿದ್ದಾರೆ.
ಇದಷ್ಟೇ ಅಲ್ಲದೇ ಸಮತಾ ಅವರು ಆರೋಪಿ ಧನರಾಜ್ ಗೆ ಶಾಕ್ ಡಿವೈಸ್ ತರೋದಕ್ಕೆ 3 ಸಾವಿರ ಹಣ ನೀಡಿರುವ ಮಾಹಿತಿಯೂ ದೊರೆತಿದೆ. ಈ ಹಿನ್ನಲೆಯಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಅವರ ಬ್ಯುಸಿನೆಸ್ ಪಾರ್ಟನ್ ಆಗಿರೋ ಸಮತಾ ಅವರನ್ನು ಎಸ್ಐಟಿ ಬಂಧಿಸೋ ಸಾಧ್ಯತೆ ಇದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಗ್ಯಾಂಗ್ ವಿರುದ್ಧ ನಡೆಯುತ್ತಿರುವ ಪೊಲೀಸ್ ತನಿಖೆ ಮತ್ತಷ್ಟು ತೀವ್ರಗೊಂಡಿದೆ. ಸಾಕಷ್ಟು ಸಾಕ್ಷ್ಯಗಳನ್ನು ಕಲೆ ಹಾಕಿರುವ ಪೊಲೀಸರು ತನಿಖೆಯನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತಿದ್ದಾರೆ.