ಬೆಂಗಳೂರು:- ದರ್ಶನ್ ಸಿಟ್ಟು ಸ್ವಭಾವದವರೇ ವರೆತೂ ಕೊಲೆ ಮಾಡುವಷ್ಟು ಕಟುಕರಲ್ಲ ಎಂದು ಶಾಸಕ ಉದಯ್ ಗೌಡ ಹೇಳಿದ್ದಾರೆ.
Bengaluru Rain: ಸಿಲಿಕಾನ್ ಸಿಟಿಯಲ್ಲಿ ಧಾರಕಾರ ಮಳೆ.. ವಾಹನ ಸವಾರರು ಪರದಾಟ!
ದರ್ಶನ್ ಅರೆಸ್ಟ್ ಆಗಿರುವ ಬಗ್ಗೆ ಮಾತನಾಡಿ, ನನಗೆ ಹಲವು ವರ್ಷಗಳಿಂದ ದರ್ಶನ್ ಸ್ನೇಹಿತ. ಆದರೆ ಈ ರೀತಿ ಮಾಡಿದ್ದಾರೆ ಅನ್ನೋದು ಗೊತ್ತಿಲ್ಲ. ಅವರ ಜೊತೆಗಿರುವವರು ಮಾಡಿದ್ರಾ? ಇವರ ಮೇಲೆ ಏನಾದ್ರೂ ಹಾಕಿದ್ರಾ ಗೊತ್ತಿಲ್ಲ. ತನಿಖೆಯಿಂದ ಎಲ್ಲವೂ ಹೊರಗೆ ಬರಬೇಕು. ನಾನು ಈಗಲೇ ಏನನ್ನೂ ಹೇಳೋಕೆ ಆಗಲ್ಲ ಎಂದು ಹೇಳಿದ್ದಾರೆ.
ಆತ ಅಭಿಮಾನಿಗಳ ಬಳಿ ಮಾಧ್ಯಮದವರ ಬಳಿ ಸ್ವಲ್ಪ ಮುಂಗೋಪದಿಂದ ಮಾತನಾಡುತ್ತಾನೆ ಅಷ್ಟೇ. ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ತನಿಖೆ ನಡೆದು ಸತ್ಯ ಹೊರಗೆ ಬರಲಿ. ಇನ್ನೇನು ಕೆಲವೇ ದಿನಗಳಲ್ಲಿ ಏನು ಎತ್ತ ಹೊರಬರುತ್ತೆ. ರಾಜ್ಯದ ಜನರಿಗೂ ಗೊತ್ತಾಗುತ್ತದೆ ಎಂದಿದ್ದಾರೆ.
ಗನ್ ಮ್ಯಾನ್ ಮೇಲೆ ದರ್ಶನ್ ಬೆಂಬಲಿಗರ ಹಲ್ಲೆ ವಿಚಾರವಾಗಿ ಮಾತನಾಡಿದ್ದು, ನನ್ನ ಗನ್ ಮ್ಯಾನ್ ಮೇಲೆ ಹಲ್ಲೆ ಅನ್ನೋದು ಗೊತ್ತಿಲ್ಲ. ಅದೆಲ್ಲವೂ ಸುಳ್ಳು. ನಿಮಗೆ ಇದೆಲ್ಲಾ ಯಾರು ಹೇಳಿದ್ದು. ಆ ರೀತಿಯ ಘಟನೆ ಆಗೇ ಇಲ್ಲ. ನನಗೆ ಐದಾರು ಮಂದಿ ಗನ್ ಮ್ಯಾನ್ ಇದ್ದಾರೆ. ಹಲ್ಲೆ ಮಾಡಿದ್ದರೆ ನನಗೆ ಗೊತ್ತಾಗುತ್ತಿರಲಿಲ್ವೇ? ಅಂತಾದ್ದೂ ಯಾವುದೂ ಆಗಿಲ್ಲ. ಅದೆಲ್ಲವೂ ಸುಳ್ಳು ಸೃಷ್ಟಿಯಷ್ಟೇ ಎಂದು ಸ್ಪಷ್ಟನೆ ನೀಡಿದ್ದಾರೆ.