ಮಂಡ್ಯ:- ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಜಲಾಯಶವನ್ನ ನಂಬಿಕೊಂಡು ಜಿಲ್ಲೆಯ ಲಕ್ಷಾಂತರ ರೈತರು ಬದುಕು ಕಟ್ಟಿಕೊಂಡಿದ್ದಾರೆ. ಆದರೆ ಈ ಬಾರಿ ಜೂನ್ ತಿಂಗಳು ಕಳೆದ ಜುಲೈ ಆರಂಭವಾದರೂ ಕೆಆರ್ಎಸ್ ಜಲಾಶಯ ನೂರು ಅಡಿ ಕೂಡ ಭರ್ತಿಯಾಗಿಲ್ಲ. ಹೀಗಾಗಿ ಜಿಲ್ಲೆಯ ರೈತರಿಗೆ ಆತಂಕ ಕಾಡುತ್ತಿದೆ. ಅಂದಹಾಗೆ ಪ್ರತಿವರ್ಷ ಕೆಆರ್ಎಸ್ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಲಾಗುತ್ತದೆ. ಜಿಲ್ಲೆಯ ರೈತರು ಭತ್ತ, ಕಬ್ಬು ಸೇರಿದಂತೆ ವಿವಿಧ ಬೆಳೆಗಳನ್ನ ಬೆಳೆಯುತ್ತಾರೆ. ಆದರೆ ಕಳೆದ ಬಾರಿ ಜಲಾಶಯ ಭರ್ತಿಯಾಗದ ಹಿನ್ನೆಲೆಯಲ್ಲಿ ಬೇಸಿಗೆ ಬೆಳೆಗೆ ನೀರು ಕೊಡಲಿಲ್ಲ. ಹೀಗಾಗಿ ಜಿಲ್ಲೆಯ ರೈತರು ಬೇಸಿಗೆ ಬೆಳೆಯನ್ನ ಬೆಳೆದಿಲ್ಲ
Ginger Benefits: ಶುಂಠಿ ಸೇವನೆಯ ಈ ಪ್ರಯೋಜನಗಳ ಬಗ್ಗೆ ತಿಳಿಯಿರಿ, ಅನೇಕ ಸಮಸ್ಯೆಗಳಿಗೆ ರಾಮಬಾಣ ಈ ಶುಂಠಿ
ಜೊತೆಗೆ ಕೆಆರ್ಎಸ್ ಜಲಾಶಯಕ್ಕೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಬರದೇ ಇದ್ದರೆ ನಾಲೆಗೆ ನೀರು ಹರಿಸುವುದಿಲ್ಲ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಇದು ಜಿಲ್ಲೆಯ ರೈತರ ಆತಂಕಕ್ಕೂ ಕೂಡ ಕಾರಣವಾಗಿದೆ.
ಜಲಾಶಯ ನೂರು ಅಡಿ ಭರ್ತಿಯಾದ ನಂತರ ಕುಡಿಯಲು ಮಾತ್ರ ನೀರು ಬಿಡಲಾಗುತ್ತದೆ. 110 ಅಡಿ ಭರ್ತಿಯಾದರೆ ಮಾತ್ರ ಬೆಳೆಗಳನ್ನು ಬೆಳೆಯಲು ನೀರು ಬಿಡಲಾಗುವುದು ಎಂದು ಸಚಿವರು ಹೇಳಿದ್ದಾರೆ