ಬೆಳಗಾವಿ: 1924ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ ಬೆಳಗಾವಿ ಸಾಕ್ಷಿಯಾಗಿತ್ತು. ಈಗ ಅಧಿವೇಶನದ ಶತಮಾನೋತ್ಸವದ ಭಾಗವಾಗಿ ಸಮಾವೇಶ ನಡೆಯುತ್ತಿದೆ. ಇನ್ನೂ ಈ ವೇಳೆ ನೀತಿ-ನಿಯಮಗಳನ್ನು ಬೋಧಿಸುವ ಸಂವಿಧಾನವನ್ನು ಎಲ್ಲರೂ ರಕ್ಷಿಸಬೇಕಿದೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
‘ಜೈ ಬಾಪು, ಜೈ ಭೀಮ್ ಮತ್ತು ಜೈ ಸಂವಿಧಾನ’ ಸಮಾವೇಶದ ಬಗ್ಗೆ ಬೆಳಗಾವಿಯಲ್ಲಿ ಮಾತನಾಡಿದ ಅವರು, ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ, ಮೊದಲಿಗೆ ಸುವರ್ಣ ಸೌಧದಲ್ಲಿ ಗಾಂಧಿ ಪುತ್ಥಳಿ ಅನಾವರಣವಾಗುತ್ತದೆ,
ಮಂಗಳವಾರ ಈ ಕೆಲಸಗಳನ್ನು ಮಾಡಿದ್ರೆ ನಿಮಗೆ ಬೇಡವೆಂದರೂ ಸಂಪತ್ತು ಹುಡುಕಿ ಬರುತ್ತೆ.!
ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಏರ್ಪಡಿಸಿರುವ ಲಂಚ್ ನಲ್ಲಿ ಎಲ್ಲರೂ ಭಾಗಿಯಾಗುತ್ತಾರೆ ಎಂದು ಹೇಳಿದರು. ಊಟದ ನಂತರ ಜೈ ಬಾಪು, ಜೈ ಭೀಮ್ ಜೈ ಸಂವಿಧಾನ ಥೀಮಿನ ಮೇಲೆ ಕಾಂಗ್ರೆಸ್ ಸಮಾವೇಶ ನಡೆಯುತ್ತದೆ, ರೀತಿ-ನೀತಿ-ನಿಯಮಗಳನ್ನು ಬೋಧಿಸುವ ಸಂವಿಧಾನವನ್ನು ಎಲ್ಲರೂ ರಕ್ಷಿಸಬೇಕಿದೆ, ಕಾಂಗ್ರೆಸ್ ನೀಡಿರುವ ಕೊಡುಗೆಯನ್ನು ಇಡೀ ವಿಶ್ವವೇ ಸ್ಮರಿಸುತ್ತದೆ ಎಂದು ಶಿವಕುಮಾರ್ ಹೇಳಿದರು.