ಚಾಮರಾಜನಗರ:- 2024ರ ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದ್ದು, ಚಾಮರಾಜನಗರ ಲೋಕಾ ಫಲಿತಾಂಶದತ್ತ ಎಲ್ಲರ ಚಿತ್ತ ನೆಟ್ಟಿದೆ. ಸಿಎಂ ಸಿದ್ದರಾಮಯ್ಯ ತವರು ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಲೋಕ ಅಖಾಡದಲ್ಲಿ ಮತ ಎಣಿಕೆ ಕಾರ್ಯಕ್ಕೆ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದೆ.
ಲೋಕಸಭಾ ರಿಸಲ್ಟ್ ಗೆ ಕೌಂಟ್ ಡೌನ್… ಮತ ಎಣಿಕೆಗೆ ಬಳ್ಳಾರಿಯಲ್ಲಿ ಭರ್ಜರಿ ಸಿದ್ಧತೆ!
ಬೇಡರಪುರ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಈಗಾಗಲೇ ಸ್ಟ್ರಾಂಗ್ ರೂಂ ನಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರವಾಗಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಶೇ. 76.81 ರಷ್ಟು ಮತದಾನ ಆಗಿದ್ದು 13,65,944 ಮಂದಿ ಮತದಾರರಿಂದ ಹಕ್ಕು ಚಲಾವಣೆಯಾಗಿದೆ. ಅಂಚೆ ಮತಪತ್ರಗಳ ಮೂಲಕ ಒಟ್ಟು 4405 ಮತ ಚಲಾವಣೆ ಆಗಿದ್ದು, ಪ್ರತಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆಯು ತಲಾ 14 ಟೇಬಲ್ ಗಳಲ್ಲಿ ನಡೆಯಲಿದೆ.
ಪ್ರತಿ ಟೇಬಲ್ಗೆ ತಲಾ 14 ಮಂದಿ ಮತ ಎಣಿಕೆ ಮೇಲ್ವಿಚಾರಕರು, 14 ಮಂದಿ ಎಣಿಕೆ ಸಹಾಯಕರು, 14 ಮಂದಿ ಮೈಕ್ರೋ ಅಬ್ಸರ್ವರ್ ಹಾಗೂ ಅಂಚೆ ಮತ ಪತ್ರ ಎಣಿಕೆಗೆ 5 ಮಂದಿ ಸೇರಿ ಒಟ್ಟು 45 ಸಿಬ್ಬಂದಿ ಇರಲಿದ್ದು, ಅಂಚೆ ಮತ ಪತ್ರ ಎಣಿಕೆಗೆ 8 ಟೇಬಲ್ಗಳ ವ್ಯವಸ್ಥೆ ಮಾಡಲಾಗಿದೆ. ಇವಿಎಂ ಮತ ಎಣಿಕೆಗಾಗಿ
ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 14 ಮತ ಎಣಿಕೆ ಟೇಬಲ್ಗಳಂತೆ ಒಟ್ಟು 112 ಟೇಬಲ್ ಸ್ಥಾಪನೆ ಮಾಡಲಾಗಿದೆ. ಸೇವಾ ಮತದಾರರು ಮತದಾನ ಮಾಡಿ ಕಳುಹಿಸಿರುವ ಮತಪತ್ರಗಳ ಎಣಿಕೆಯನ್ನು ಇಟಿಪಿಬಿಎಸ್ ತಂತ್ರಾಂಶದಲ್ಲಿ ನಡೆಸಲು 2 ಟೇಬಲ್ ಸ್ಥಾಪನೆ ಮಾಡಲಾಗಿದೆ.
ಅಂಚೆ ಮತಪತ್ರಗಳ ಎಣಿಕೆ ಪ್ರಾರಂಭವಾದ 30 ನಿಮಿಷಗಳ ನಂತರ, ಇವಿಎಂ ಮತ ಎಣಿಕೆಯನ್ನು ಆರಂಭವಾಗಲಿದೆ.