ಜೈಪುರ:- ರಾಜಸ್ಥಾನದ ಅಲ್ವಾರ್ನ ನೌಗಾಂವ್ ಬಳಿಯ ಖುಷ್ಪುರಿ ಗ್ರಾಮದ ಬಳಿ ದೆಹಲಿ-ಜೈಪುರ ಎಕ್ಸ್ಪ್ರೆಸ್ವೇಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಮಾಜಿ ವಿದೇಶಾಂಗ ಸಚಿವ ಜಸ್ವಂತ್ ಸಿಂಗ್ ಸೊಸೆ ಸಾವನ್ನಪ್ಪಿದ್ದಾರೆ.
ಮನ್ವೇಂದ್ರ ಅವರು ತಮ್ಮ ಕುಟುಂಬದೊಂದಿಗೆ ದೆಹಲಿಯಿಂದ ಜೈಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಮೋರಿ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಘಟನೆಯಲ್ಲಿ ಪತ್ನಿ ಚಿತ್ರಾ ಸಿಂಗ್ ಸ್ಥಳದಲ್ಲೇ ಸಾವನ್ನಪ್ಪಿದರೆ, ಕೈ ನಾಯಕ ಮನ್ವೇಂದ್ರ ಸಿಂಗ್ ಹಾಗೂ ಅವರ ಮಗ ಹಮೀರ್ ಸಿಂಗ್ ಗಾಯಗೊಂಡಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಸಿಕ್ಕಿದ ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಗಾಯಾಳುಗಳನ್ನು ಅಲ್ವಾರ್ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ
ತಂದೆ-ಮಗ ಇಬ್ಬರಿಗೂ ಪಕ್ಕೆಲುಬುಗಳಿಗೆ ಗಾಯಗಳಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಸದ್ಯ ಗಾಯಾಳುಗಳ ಸ್ಥಿತಿ ಅಪಾಯದಿಂದ ಪಾರಾಗಿದೆ ಎಂದು ಹೇಳಲಾಗುತ್ತಿದೆ.