ಬೆಂಗಳೂರು :- ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರು ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ತಮ್ಮ ವಿರುದ್ಧ ದಾಖಲಾಗಿರುವ ಎರಡು ಎಫ್ಐಆರ್ ರದ್ದುಪಡಿಸುವಂತೆ ಕೋರಿ ಜೆಡಿಎಸ್ ಶಾಸಕ ಎಚ್ಡಿ ರೇವಣ್ಣ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಪೋಷಕರೇ ಎಚ್ಚರ, ಎಚ್ಚರ.. ಅಂತರಾಜ್ಯ ಮಕ್ಕಳ ಕಳ್ಳರು ಎಂಟ್ರಿ ಕೊಟ್ಟಿದ್ದಾರೆ..!
ಹಾಸನದ ಹೊಳೆನರಸೀಪುರದಲ್ಲಿ ಲೈಂಗಿಕ ದೌರ್ಜನ್ಯ ಕೇಸ್ ಹಾಗೂ ಮೈಸೂರಿನ ಕೆಆರ್ ಪೇಟೆ ಸಂತ್ರಸ್ತೆ ಅಪಹರಣ ಪ್ರಕರಣ ದಾಖಲಾಗಿವೆ. ಇದೀಗ ತಮ್ಮ ವಿರುದ್ಧ ದಾಖಲಾದ ಈ ಎರಡೂ ಎಫ್ಐಆರ್ಗಳನ್ನು ರದ್ದುಪಡಿಸುವಂತೆ ಕೋರಿ ಹೈಕೋರ್ಟ್ಗೆ ಮಾಜಿ ಸಚಿವ ಎಚ್.ಡಿ ರೇವಣ್ಣ ಪ್ರಕರಣಗಳಲ್ಲಿ ಹುರುಳಿಲ್ಲ, ಇದು ರಾಜಕೀಯ ಪ್ರೇರಿತವಾಗಿದೆ. ಹೀಗಾಗಿ ಎಫ್ಐಆರ್ಗಳನ್ನು ರದ್ದು ಮಾಡಬೇಕು ಎಂದು ಹೈಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
ಇತ್ತೀಚೆಗೆ ಕೆ.ಆರ್.ನಗರದ ಸಂತ್ರಸ್ತೆಯ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿ ರೇವಣ್ಣ ಅವರನ್ನು ಎಸ್ಐಟಿ ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿತ್ತು. ಆರು ದಿನಗಳ ನಿರಂತರ ಕಾನೂನು ಹೋರಾಟ ಮಾಡಿ ಮೇ 13ರಂದು ಜಾಮೀನು ಪಡೆದುಕೊಂಡು ಜೈಲಿನಿಂದ ಆಚೆ ಬಂದಿದ್ದರು. ನಂತರ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಮಾಜಿ ಸಚಿವ ಎಚ್ಡಿ ರೇವಣ್ಣ ಅವರಿಗೆ ಮೇ 20ರಂದು ಜಾಮೀನು ಮಂಜೂರಾಗಿತ್ತು. ಇದೀಗ ಎರಡು ಎಫ್ಐಆರ್ ರದ್ದು ಮಾಡುವಂತೆ ನ್ಯಾಯಾಲಯದ ಮೊರೆ ಹೋಗಿದ್ದಾರೆ.