ಮಂಡ್ಯ:- ಬಿಜೆಪಿ-ಜೆಡಿಎಸ್ ಮೈತ್ರಿ ವಿರುದ್ಧ ನಾರಾಯಣಗೌಡ ಸಿಡಿದೆದ್ದಿದ್ದಾರೆ. ಮಂಡ್ಯದಲ್ಲಿ ಪಕ್ಷ ಬಲವರ್ಧನೆಯಾಗುತ್ತಿರುವ ನಡುವೆ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಡದಂತೆ ಹಾಗೂ ಹಾಲಿ ಸಂಸದೆ ಸುಮಲತಾ ಅವರಿಗೇ ಟಿಕೆಟ್ ನೀಡುವಂತೆ ಪಟ್ಟುಹಿಡಿದಿರುವ ಬಿಜೆಪಿಯ ಕೆಸಿ ನಾರಾಯಣಗೌಡ ಅವರು ಮೈತ್ರಿ ವಿರುದ್ಧ ಸಿಡಿದೆದ್ದಿದ್ದಾರೆ. ಸಿದ್ದರಾಮಯ್ಯ ಅವರನ್ನು ರಹಸ್ಯವಾಗಿ ಭೇಟಿಯಾಗಿ ಮಾತುಕತಡೆ ನಡೆಸಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲ ಕೆರಳಿಸಿದೆ.
ದಳ-ಕಮಲ ಮೈತ್ರಿ ವಿರುದ್ಧ ಸಿಡಿದೆದ್ದ ನಾರಾಯಣಗೌಡ ಕಮಲ ಬಿಟ್ಟು ಕೈ ಪಾಳಯ ಸೇರಲು ತಯಾರಿ ನಡೆಸುತ್ತಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ.
ಮಂಡ್ಯದಲ್ಲಿ ಜೆಡಿಎಸ್ -ಬಿಜೆಪಿ ಮೈತ್ರಿ ವಿರುದ್ಧ ನಾರಾಯಣಗೌಡ ಅಸಮಾಧಾನ ವ್ಯಕ್ತಪಡಿಸಿದ್ದರು. ಮಂಡ್ಯ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಡದಂತೆ ಬಹಿರಂಗವಾಗಿಯೇ ಹೇಳಿಕೆ ನೀಡುತ್ತಾ ಬಂದಿದ್ದಾರೆ. ಆದರೆ, ಮಂಡ್ಯ ಬಿಜೆಪಿ ಕೈ ತಪ್ಪುವುದು ಬಹುತೇಕ ಖಚಿತವಾಗಿರುವ ಹಿನ್ನೆಲೆ ನಾರಾಯಣಗೌಡ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಳ್ಳಲು ಮುಂದಾಗಿರುವಂತೆ ಗೋಚರಿಸುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ ನಾರಾಯಣಗೌಡ ಅವರು ಕಾಂಗ್ರೆಸ್ ಟಿಕೆಟ್ ಕೇಳಿದ್ದಾರೆ ಎನ್ನಲಾಗುತ್ತಿದೆ. ಆದರೆ ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಲು ಆಗುವುದಿಲ್ಲ ಎಂದ ಸಿದ್ದರಾಮಯ್ಯ ಹೇಳಿದ್ದಾರೆ. ಅಲ್ಲದೆ, ಮೊದಲು ಕಾಂಗ್ರೆಸ್ ಪಕ್ಷ ಸೇರುವಂತೆ ಸಲಹೆ ನೀಡಿದ್ದಾರೆ ಎನ್ನಲಾಗುತ್ತಿದೆ.