ಬಿಗ್ ಬಾಸ್ ಮನೆಯಿಂದ ಡ್ರೋನ್ ಪ್ರತಾಪ್ (Drone Pratap) ಮತ್ತು ಸಂಗೀತಾ ಶೃಂಗೇರಿ (Sangeetha Sringeri) ಹೊರ ಬಂದಿದ್ದಾರೆ ಎನ್ನುವ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಟಾಸ್ಕ್ ನಲ್ಲಿ ಇಬ್ಬರಿಗೂ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎನ್ನುವ ಮಾಹಿತಿ ಇದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ಟೆಲಿಕಾಸ್ಟ್ ಆಗುತ್ತಿದ್ದು, ಅಲ್ಲಿಯೂ ಇಬ್ಬರೂ ಕಾಣಿಸಿಕೊಳ್ಳುತ್ತಿಲ್ಲ.
ಕಳೆದ ಎರಡು ದಿನಗಳಿಂದ ಗಂಧರ್ವರು ಮತ್ತು ರಾಕ್ಷಸರು ಎಂದು ಎರಡು ಗುಂಪುಗಳಾನ್ನಾಗಿ ಮಾಡಿ, ಹಲವು ಟಾಸ್ಕ್ ಗಳನ್ನು ನೀಡಲಾಗಿದೆ. ಈ ಟಾಸ್ಕ್ ನಲ್ಲಿ ಡ್ರೋನ್ ಮತ್ತು ಸಂಗೀತಾ ಗಾಯ ಮಾಡಿಕೊಂಡಿದ್ದಾರೆ ಎನ್ನುವುದು ಲೇಟೆಸ್ಟ್ ಅಪ್ ಡೇಟ್. ಈ ವಿಷಯದ ಕುರಿತಂತೆ ವಾಹಿನಿಯಾಗಲಿ ಅಥವಾ ಸಂಬಂಧಿಸಿದವರಾಗಲಿ ಯಾವುದೇ ಮಾಹಿತಿ ನೀಡಿಲ್ಲ. ಆದರೆ, ಸೋಷಿಯಲ್ ಮೀಡಿಯಾದಲ್ಲಿ ಮಾತ್ರ ನ್ಯೂಸ್ ಭರ್ಜರಿ ಸೇಲ್ ಆಗುತ್ತಿದೆ.
ತೆಲಂಗಾಣದ 2ನೇ ಮುಖ್ಯಮಂತ್ರಿ ಆಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ
ರಾಕ್ಷಸರು ಮತ್ತು ಗಂಧರ್ವರ ಗುಂಪುಗಳ ನಡುವೆ ಭಾರೀ ಕದನವೇ ನಡೆಯುತ್ತಿದೆ. ಹಲವರು ಟಾರ್ಗೆಟ್ ಮಾಡಿಕೊಂಡು ಆಡುತ್ತಿದ್ದಾರೆ. ಅದರಲ್ಲೂ ಸಂಗೀತಾ ಮತ್ತು ವಿನಯ್ ಮಧ್ಯ, ಕಾರ್ತಿಕ್ ಮತ್ತು ವಿನಯ್ ಮಧ್ಯ, ಸಂಗೀತಾ ಮತ್ತು ನಮ್ರತಾ ಮಧ್ಯ ಹೀಗೆ ವೈಯಕ್ತಿಕವಾಗಿ ಆಟಗಳನ್ನು ಆಡುತ್ತಿದ್ದಾರೆ. ಒಬ್ಬರಿಗೊಬ್ಬರನ್ನು ಕೆಣಕುತ್ತಿದ್ದಾರೆ. ಇದು ಎಲ್ಲೋ ಒಂದು ಕಡೆ ಅನಾಹುತ ಮಾಡಲಿದೆ ಎಂದೇ ಅಂದಾಜಿಸಲಾಗಿತ್ತು. ಬಹುಶಃ ಅದೇ ಆಗಿರಬಹುದು.
ಸದ್ಯಕ್ಕೆ ಡ್ರೋನ್ ಮತ್ತು ಸಂಗೀತಾರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನುವ ಮಾಹಿತಿ ಕೇಳಿ ಬರುತ್ತಿದೆ. ಈ ಹಿಂದೆ ತನಿಷಾರನ್ನು ಹೀಗೆಯೇ ಎರಡು ದಿನಗಳ ಕಾಲ ಆಸ್ಪತ್ರೆಯಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿತ್ತು. ಆನಂತರ ಬಿಗ್ ಬಾಸ್ (Bigg Boss Kannada) ಮನೆಗೆ ಕರೆತರಲಾಗಿತ್ತು. ಈ ಇಬ್ಬರನ್ನೂ ಹಾಗೆಯೇ ಮಾಡುವ ಸಾಧ್ಯತೆ ಇದೆ.