ನೆಲಮಂಗಲ: ಅಬಕಾರಿ ಅಧಿಕಾರಿಗಳು ಭರ್ಜರಿ ಕಾರ್ಯಚರಣೆ ನಡೆಸಿ 10.5 ಗಾಂಜಾ ವಶಪಡಿಸಿಕೊಂಡ ಘಟನೆ ನೆಲಮಂಗಲ ತಾಲೂಕಿನ ಜಾಸ್ ಟೋಲ್ ಬಳಿ ಜರುಗಿದೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವೇಳೆಓಡಿಸ್ಸಾ ಸೋಮನಾಥ್, ಬೀರದಾಂಡ ಮೂಲದ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಬಸ್ ಮೂಲಕ ತಂದು ಮಾರಾಟಕ್ಕೆ ಯತ್ನಿಸುತ್ತಿದ್ದ ವೇಳೆ ದಾಳಿ ನಡೆದಿದೆ.
ಇನ್ನೂ ನೆಲಮಂಗಲ ತಾಲೂಕಿನ ಬಿನ್ನಮಂಗಲ ಬಳಿ ಮದ್ಯ ವಶಕ್ಕೆ ಪಡೆಯಲಾಗಿದೆ. ಅಂಗಡಿಯಲ್ಲಿ ಮಾರಾಟ ಮಾಡುವ ವೇಳೆ 11 ಸಾವಿರ ಮೌಲ್ಯದ 21 ಲೀಟರ್ ಮಧ್ಯ ವಶಕ್ಕೆ ಪಡೆಯಲಾಗಿದ್ದು, ತನಿಖೆ ಮುಂದುವರಿದಿದೆ.