ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಜಾಮೀನು ಪಡೆದ ಕೆಲವೇ ಗಂಟೆಗಳ ನಂತರ ಜಾರಿ ನಿರ್ದೇಶನಾಲಯ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿ ಜಲಮಂಡಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಭಾನುವಾರ ಮತ್ತೊಂದು ಸಮನ್ಸ್ ಜಾರಿ ಮಾಡಿದೆ.
ಹಿಂದಿನ ಸಮನ್ಸ್ಗಳನ್ನು ಕಾನೂನುಬಾಹಿರ ಎಂದು ಕರೆದಿದ್ದ ಕೇಜ್ರಿವಾಲ್ ವಿಚಾರಣೆಗೆ ಹಾಜರಾಗಲು ನಿರಾಕರಿಸಿದ್ದರು. ಈ ಹಿನ್ನೆಲೆ ಜಾರಿ ನಿರ್ದೇಶನಾಲಯ ಎರಡು ದೂರುಗಳನ್ನು ನೀಡಿತ್ತು. ಶನಿವಾರ ಇ.ಡಿ ನೀಡಿದ ದೂರಿನ ವಿಚಾರಣೆಗಾಗಿ ಅರವಿಂದ್ ಕೇಜ್ರಿವಾಲ್ ಶನಿವಾರ ರೋಸ್ ಅವೆನ್ಯೂ ಕೋರ್ಟ್ಗೆ ಹಾಜರಾಗಿದ್ದರು.
KSRTC ಸಿಬ್ಬಂದಿಗಳಿಗೆ ಭರ್ಜರಿ ಸಿಹಿ ಸುದ್ದಿ.! ಬಾಕಿ ಮೊತ್ತ ಪಾವತಿಗೆ ಆದೇಶ
ಈ ಪ್ರಕರಣದಲ್ಲಿ ನ್ಯಾಯಾಲಯ ಕೇಜ್ರಿವಾಲ್ ಅವರಿಗೆ 15,000 ರೂ. ಮೌಲ್ಯದ ಶ್ಯೂರಿಟಿ ಬಾಂಡ್ ಹಾಗೂ 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಶನಿವಾರ ಜಾಮೀನು ಮಂಜೂರು ಮಾಡಿತ್ತು. ಒಂಬತ್ತನೇ ಸಮನ್ಸ್ನಲ್ಲಿ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್ 21 ರಂದು ಕೇಜ್ರಿವಾಲ್ ಹಾಜರಾಗುವಂತೆ ತನಿಖಾ ಸಂಸ್ಥೆ ತಿಳಿಸಿದೆ.