ನವದೆಹಲಿ: ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಮತ್ತು ಕೇಂದ್ರೀಯ ತನಿಖಾ ದಳ (CBI) ದಾಖಲಿಸಿರುವ ಪ್ರಕರಣದಲ್ಲಿ ಜಾಮೀನು (Bail) ನೀಡುವಂತೆ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ (Manish Sisodia) ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಪಿಎಂಎಲ್ಎ ವಿಶೇಷ ನ್ಯಾಯಾಲಯ ರೋಸ್ ಅವೆನ್ಯೂ ಕೋರ್ಟ್ ಎರಡನೇ ಸಾಮಾನ್ಯ ಜಾಮೀನು ಅರ್ಜಿ ವಜಾ ಮಾಡಿದ ಹಿನ್ನೆಲೆ ಮೇಲ್ಮನವಿ ಸಲ್ಲಿಸಿರುವ ಅವರು ವಿಧಾನಸಭೆ ಸದಸ್ಯನಾಗಿದ್ದು, ಲೋಕಸಭಾ ಚುನಾವಣೆ ಹಿನ್ನೆಲೆ ತುರ್ತು ವಿಚಾರಣೆ ನಡೆಸುವಂತೆ ಇಂದು ಮನವಿ ಮಾಡಿದರು. ಆದರೆ ತುರ್ತು ವಿಚಾರಣೆಗೆ ನಿರಾಕರಿಸಿದ ಹೈಕೋರ್ಟ್ ಶುಕ್ರವಾರ ವಿಚಾರಣೆ ನಡೆಸುವುದಾಗಿ ತಿಳಿಸಿದೆ.
ಉದ್ಯೋಗ ಆಕಾಂಕ್ಷಿಗಳೇ ಗಮನಿಸಿ.. BBMPಯಲ್ಲಿ 11,307 ಗ್ರೂಪ್ ಡಿ ಹುದ್ದೆಗಳು ಖಾಲಿ ಇದೆ..! ಇಂದೇ ಅರ್ಜಿ ಸಲ್ಲಿಸಿ
ರೋಸ್ ಅವೆನ್ಯೂ ಕೋರ್ಟ್ನಲ್ಲಿ ನಡೆದ ವಿಚಾರಣೆ ವೇಳೆ ಸಿಬಿಐ ಪರ ವಾದ ಮಂಡಿಸಿದ್ದ ಸಿಬಿಐ ಪ್ರಾಸಿಕ್ಯೂಟರ್ ಪಂಕಜ್ ಗುಪ್ತಾ, ಜಾಮೀನು ಅರ್ಜಿಯನ್ನು ವಿರೋಧಿಸಿದರು. ಸಿಸೋಡಿಯಾ ಅವರು ರಾಜಕೀಯ ಪ್ರಭಾವ ಹೊಂದಿರುವ ಪ್ರಬಲ ವ್ಯಕ್ತಿ. ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಿಸೋಡಿಯಾ ಇತರೇ ಆರೋಪಿಗಳ ಸಮಾನತೆಗೆ ಅರ್ಹರಲ್ಲ ಎಂದು ವಾದಿಸಿದರು. ಸಿಸೋಡಿಯಾ ಅವರು ಸಾಕ್ಷ್ಯ ನಾಶ ಮತ್ತು ಅಧಿಕಾರದ ದುರುಪಯೋಗ ಮಾಡಿಕೊಳ್ಳಬಹುದು. ಇದು ತನಿಖೆಗೆ ಅಡ್ಡಿಯಾಗಬಹುದು ಎಂದು ಗುಪ್ತಾ ಹೇಳಿದರು.