ಚಾಮರಾಜನಗರ:- ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದ ಆವರಣದಲ್ಲಿ ಕೃಷಿ ಇಲಾಖೆಯಿಂದ ಆಯೋಜಿಸಲಾಗಿದ್ದ ರೈತ ದಿನಾಚರಣೆ ಮತ್ತು ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬದ ವಸ್ತು ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಚಾಲನೆ ನೀಡಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದ ಆವರಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬದ ವಸ್ತು ಪ್ರದರ್ಶನದಲ್ಲಿ ಜಿಲ್ಲೆಯ ಹಾಗೂ ಹೊರ ಜಿಲ್ಲೆಗಳಿಂದ ಆಗಮಿಸಿದ್ದ ರೈತರು ಸಿರಿಧಾನ್ಯಗಳಿಂದ ತಯಾರಿಸಿದ್ದ ತಿನಿಸುಗಳು ಹಾಗೂ ವಿವಿಧ ಇಲಾಖೆಗಳಿಂದ ತಯಾರಿಸಲಾಗಿದ್ದ ಸಿರಿಧಾನ್ಯಗಳ ಪದಾರ್ಥಗಳ ಪ್ರದರ್ಶನಗೊಂಡು ಮಾರಾಟವಾದವು.
ಇದೇ ಸಂದರ್ಭದಲ್ಲಿ ಎಲ್ಲಾ ಮಳಿಗೆಗಳಿಗೆ ತೆರಳಿದ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಅವರು ರೈತರನ್ನು ಪರಿಚಯ ಮಾಡಿಕೊಂಡು ರೈತರು ಸಿರಿಧಾನ್ಯಗಳಿಂದ ತಯಾರಿಸಲಾಗಿದ್ದ ತಿನಿಸುಗಳ ರುಚಿ ಸವಿದು ರೈತರಿಗೆ ಶುಭಕೋರಿದರು.