ಬಾಗಲಕೋಟೆ : ವಿಜ್ಞಾನದ ಆವಿಷ್ಕಾರಗಳು ಜಗತ್ತಿಗೆ ಬೆಳಕಾಗಬೇಕು. ಆ ನಿಟ್ಟಿನಲ್ಲಿ ಯುವ ವಿಜ್ಞಾನಿಗಳನ್ನು ಸೃಷ್ಟಿಸುವ ಕಾರ್ಯದಲ್ಲಿ ವಿಜ್ಞಾನ ಶಿಕ್ಷಕರ ಪಾತ್ರ ಪ್ರಮುಖವಾಗಿದೆ. ಬದಲಾದ ಆಧುನಿಕತೆಯ ಕಾಲದಲ್ಲಿ ಮಕ್ಕಳನ್ನು ತರಗತಿ ಕೋಣೆಯಲ್ಲಿ ನಮ್ಮತ್ತ ಸೆಳೆದು ಪಾಠ ಬೋಧನೆ ಮಾಡುವುದು ಒಂದು ಸವಾಲಿನ ಕೆಲಸವಾಗಿದೆ. ಆ ನಿಟ್ಟಿನಲ್ಲಿ ನಾವುಗಳೆಲ್ಲ ಮಕ್ಕಳ ಮಟ್ಟಕ್ಕೆ ಇಳಿದು ಸ್ಥಳೀಯ ಉದಾಹರಣೆಯೊಂದಿಗೆ ಬೋಧಿಸುವುದು ಅನಿವಾರ್ಯವಾಗಿದೆ ಎಂದು ಶಿಕ್ಷಕ ಪಿ.ಆರ್. ಒಡೆಯರ್ ಹೇಳಿದರು.
ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿಯ ಜನತಾ ಶಿಕ್ಷಣ ಸಂಸ್ಥೆಯ ಶಿಕ್ಷಕರ ಮಹಾವಿದ್ಯಾಲಯದಲ್ಲಿ ವಿಜ್ಞಾನ ದಿನಾಚರಣೆಯ ನಿಮಿತ್ತ ವಿಜ್ಞಾನ ವಸ್ತು ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮವನ್ನು ಉದ್ಘಾಟಿಸಿ ವಿಜ್ಞಾನ ವಸ್ತು ಪ್ರದರ್ಶನವನ್ನು ವೀಕ್ಷಿಸಿ ಉತ್ತಮ 3 ಮಾದರಿಗಳನ್ನು ಮಾಡಿದ ಗುಂಪುಗಳನ್ನು ಆಯ್ಕೆ ಮಾಡಿ ಪ್ರಶಸ್ತಿ ನೀಡಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಎಂ.ವಿ . ಬೋಡಿ ವಹಿಸಿಕೊಂಡಿದ್ದರು