ಮಾಲೀಕರಿಂದ ಕಾರ್ಮಿಕರ ಮೇಲಿನ ಶೋಷಣೆ ನಿಲ್ಲಬೇಕು: ಗಾಂಧಿನಗರ ನಾರಾಯಣಸ್ವಾಮಿ!

ಕೋಲಾರ: ಕಾರ್ಮಿಕರ ನೂರಾರು ಹೋರಾಟಗಳ ಫಲವಾಗಿ ದೇಶದಲ್ಲಿ ಜಾರಿಯಾಗಿರುವ ಹಲವು ಕಾರ್ಮಿಕ ಕಾನೂನುಗಳನ್ನು ಇಂದು ಮಾಲೀಕರ ಪರವಾಗಿ ತಿದ್ದುಪಡಿ ಮಾಡಿ, ಕಾರ್ಮಿಕರನ್ನು ಶೋಷಣೆ ಮಾಡಲು ಮುಕ್ತ ಅವಕಾಶವನ್ನು ನೀಡಿದೆ. ಈ ಕುರಿತು ಕಾರ್ಮಿಕರು ಒಗ್ಗಟ್ಟಿನಿಂದ ಸಮರಶೀಲ ಹೋರಾಟವನ್ನು ನಡೆಸಬೇಕಾದ ಅನಿವಾರ್ಯತೆ ಇದೆ ಎಂದು ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಅವ್ರು‌ ಹೇಳಿದ್ರು. ಕೋಲಾರ ತಾಲ್ಲೂಕಿನ ನರಸಾಪುರ ಕೈಗಾರಿಕಾ ಪ್ರಾಂಗಣದಲ್ಲಿರುವ ಹಲವು ಕೈಗಾರಿಕಾ ಕಾರ್ಮಿಕ ಸಂಘಟನೆಗಳ ಜಂಟಿಯಾಗಿ ಎಕ್ಸಿಡಿ ಕೈಗಾರಿಕೆಯ ಮುಂಭಾಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿಶ್ವ ಕಾರ್ಮಿಕ … Continue reading ಮಾಲೀಕರಿಂದ ಕಾರ್ಮಿಕರ ಮೇಲಿನ ಶೋಷಣೆ ನಿಲ್ಲಬೇಕು: ಗಾಂಧಿನಗರ ನಾರಾಯಣಸ್ವಾಮಿ!