ನವದೆಹಲಿ:- ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ವಿದೇಶಕ್ಕೆ ಹಾರಿರುವ ಬಗ್ಗೆ ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ವಿದೇಶಕ್ಕೆ ಹಾರಿರುವ ಬಗ್ಗೆ ಸ್ಫೋಟಕ ಮಾಹಿತಿ ನೀಡಿದ ವಿದೇಶಾಂಗ ಸಚಿವಾಲಯ ಸ್ಫೋಟಕ ಮಾಹಿತಿ ನೀಡಿದ್ದಾರೆ.
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹೆಚ್ಚಲಿದೆ ತಾಪಮಾನ.. ರೆಡ್ ಅಲರ್ಟ್…!
ಪ್ರಜ್ವಲ್ ಅವರನ್ನ ವಿದೇಶಕ್ಕೆ ಹೋಗುವಂತೆ ಹೇಳಿದ್ಯಾರು? ವೀಸಾ ಇಲ್ಲದೇ ದಿಢೀರ್ ವಿದೇಶಕ್ಕೆ ಹೋಗಿದ್ದೇಗೆ? ಹೀಗೆ ಪ್ರಜ್ವಲ್ ವಿದೇಶಕ್ಕೆ ಹಾರಿರುವ ಹಿಂದಿನ ಬಗ್ಗೆ ಹಲವು ಚರ್ಚೆಗಳು ನಡೆಯುತ್ತಿವೆ. ಇದರ ಮಧ್ಯೆ ಕಾಂಗ್ರೆಸ್, ದೇವೇಗೌಡ ಮತ್ತು ಕೇಂದ್ರ ಸರ್ಕಾರದ ಮೇ ಆರೋಪ ಮಾಡಿದೆ. ಇದರ ಬೆನ್ನಲ್ಲೇ ವಿದೇಶಾಂಗ ಸಚಿವಾಲಯವು ಸ್ಪಷ್ಟನೆ ನೀಡಿದ್ದು, ವಿದೇಶಕ್ಕೆ ತೆರಳಲು ಸಚಿವಾಲಯದಿಂದ ಯಾವುದೇ ಅನುಮತಿ ಕೇಳಿರಲಿಲ್ಲ. ವಿದೇಶಾಂಗ ಇಲಾಖೆಯಿಂದ ಯಾವುದೇ ವೀಸಾ ನೋಟ್ ಕೂಡ ನೀಡಿಲ್ಲ. ಬದಲಾಗಿ ಅವರು ರಾಜತಾಂತ್ರಿಕ ಪಾಸ್ಪೋರ್ಟ್ ಮೂಲಕ ವಿದೇಶಕ್ಕೆ ಹೋಗಿದ್ದಾರೆ ಎಂದು ಸ್ಪಷ್ಟನೆ ನೀಡಿದೆ.
ಪ್ರಕರಣ ದಾಖಲಾಗುತ್ತಿದ್ದಂತೆಯೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪರಾರಿಯಾಗಿರುವ ಬಗ್ಗೆ ಸಾಕಷ್ಟು ಹಲವು ರೀತಿಯ ಚರ್ಚೆಗಳು ನಡೆಯುತ್ತಿರವ ಬೆನ್ನಲ್ಲೇ ದೆಹಲಿಯಲ್ಲಿಂದು ವಿದೇಶಾಂಗ ಇಲಾಖೆಯ ವಕ್ತಾರ ರಣಧೀರ್ ಜೈಸ್ವಾಲ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಪ್ರಜ್ವಲ್ ರೇವಣ್ಣ ಜರ್ಮನಿಗೆ ತೆರಳಲು ನಾವು ಕೂಡ ಅನುಮತಿ ನೀಡಿಲ್ಲ. ವಿದೇಶಾಂಗ ಇಲಾಖೆಯಿಂದ ಯಾವುದೇ ವೀಸಾ ನೋಟ್ ಸಹ ಕೊಟ್ಟಿಲ್ಲ. ರಾಜತಾಂತ್ರಿಕ ಪಾಸ್ಪೋರ್ಟ್ ಹೊಂದಿರುವವರಿಗೆ ಯಾವುದೇ ವೀಸಾ ಅಗತ್ಯವಿಲ್ಲ. ಜರ್ಮನಿಗೆ ಪ್ರಯಾಣಿಸಲು ಸಚಿವಾಲಯವು ವೀಸಾ ಟಿಪ್ಪಣಿಯನ್ನೂ ನೀಡಿಲ್ಲ. ರಾಜತಾಂತ್ರಿಕ ಪಾಸ್ಪೋರ್ಟ್ನಲ್ಲಿ ಪ್ರಜ್ವಲ್ ರೇವಣ್ಣ ಪ್ರಯಾಣಿಸಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ