ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆ ಕಾಂಗ್ರೆಸ್ ಅವರು ಮೇಕೆದಾಟು ಪಾದಯಾತ್ರೆ ಕೈ ಬಿಡಬೇಕೆಂದು ಸಚಿವ ಎಸ್ ಟಿ ಸೋಮಶೇಖರ್ ಮನವಿ ಮಾಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆ ರಾಜ್ಯಗಳಲ್ಲಿ, ವಿದೇಶದಲ್ಲೂ ಕೊರೋನಾ ಪ್ರಕರಣ ಹೆಚ್ಚಾಗಿದ್ದು,
ಎರಡನೇ ಅಲೆಯಲ್ಲಿ ಸಾಕಷ್ಟು ಅನಾಹುತವಾಗಿದೆ. ಅದು ಮೂರನೇ ಅಲೆಯಲ್ಲಿ ಆಗಬಾರದು. ಕಾಂಗ್ರೆಸ್ ನಾಯಕರು ಇದನ್ನು ಅರ್ಥ ಮಾಡಿಕೊಂಡು ಜನರ ಹಿತದೃಷ್ಟಿಯಿಂದ ಪಾದಯಾತ್ರೆ ಕೈ ಬಿಡಬೇಕು ಎಂದು ಹೇಳಿದರು. ಇನ್ನೂ ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ಅವರು ಪಾದಯಾತ್ರೆ ಅಸ್ತ್ರ ಇಟ್ಟುಕೊಂಡಿದ್ದಾರೆ ಎಂದು ಎಸ್ ಟಿ ಸೋಮಶೇಖರ್ ಟೀಕೆ ಮಾಡಿದ್ದಾರೆ.

