ಶಿವಮೊಗ್ಗ: ಸಾಗರ ತಾಲೂಕಿನ ಆನಂದಪುರ ಸಮೀಪದ ಅಡೂರು ಗ್ರಾಮದಲ್ಲಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿಯೋರ್ವ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮನುಷ್ ಡಿ (19) ಮೃತ ರ್ದುದೈವಿ. ಹೊಸನಗರ ತಾಲೂಕಿನ ರಿಪ್ಪನ್ಪೇಟೆ ಸರ್ಕಾರಿ ಪದವಿ ಕಾಲೇಜಿನಲ್ಲಿ ಬಿಎ ವ್ಯಾಸಾಂಗ ಮಾಡುತಿದ್ದ. ಇತ ಸೆಮಿಸ್ಟರ್ ಇಂಗ್ಲಿಷ್ ವಿಷಯದಲ್ಲಿ ಫೇಲ್ ಆಗಿದ್ದ. ಇತ್ತೀಚೆಗೆ ನಡೆದಿದ್ದ ಸೆಮಿಸ್ಟರ್ ವಿಷಯದಲ್ಲಿ ಅನುತ್ತೀರ್ಣನಾಗಿದ್ದ. ಇದರಿಂದ ಬೇಸತ್ತು ಆನಂದಪುರ ಸಮೀಪದ ಅಡೂರು ಗ್ರಾಮದ ನಿವಾಸದಲ್ಲಿ ಕಳೆನಾಶಕ ಸೇವಿಸಿದ್ದಾನೆ.
ವಿಷಯ ತಿಳಿದ ಕೂಡಲೇ ವಿದ್ಯಾರ್ಥಿ ಮನುಷ್ನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿ ಕೊನೆಯುಸಿರೆಳೆದಿದ್ದಾನೆ.