ಬೆಂಗಳೂರು: ಕೆಲಸದಿಂದ ತೆಗೆದಿದ್ದಕ್ಕೆ ಯುವತಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಟಿ.ಸಿ.ಎಸ್ ಕಂಪನಿಗೆ ಬಾಂಬ್ ಬೆದರಿಕೆ ಕರೆ ಮಾಡಿದ್ದಾಳೆ. ಕರೆ ಬರುತ್ತಿದ್ದಂತೆ ಉದ್ಯೋಗಿಗಳು ಕಂಪನಿಯಿಂದ ಹೊರಬಂದಿದ್ದು, ಕೂಡಲೇ ಪರಪ್ಪನ ಅಗ್ರಹಾರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪರಪ್ಪನ ಅಗ್ರಹಾರ ಪೊಲೀಸರಿಗೆ ಮಾಹಿತಿ ತಿಳಿಸಿದ್ದು, ಕಂಪನಿಯ ಬಿ ಬ್ಲಾಕ್ನಲ್ಲಿ ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ ನಡೆಸಿತ್ತು, ಆಗ ಇದೊಂದು ಹುಸಿ ಬಾಂಬ್ ಕರೆ ಎಂದು ಖಚಿತವಾಗಿದೆ.
ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ
ಬೆಳಗಾವಿ ಮೂಲದ ಯುವತಿ ಟಿ.ಸಿ.ಎಸ್ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದು, ಇತ್ತೀಚಿಗೆ ಕೆಲಸದಿಂದ ತೆಗೆಯಲಾಗಿತ್ತು. ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಗ ಯುವತಿ ಕ್ಯಾಬ್ ಚಾಲಕನನ್ನು ಪರಿಚಯ ಮಾಡಿಕೊಂಡಿದ್ದಳು. ಪರಿಚಿತ ಕ್ಯಾಬ್ ಚಾಲಕನಿಗೆ ಕುಡಿದ ಮತ್ತಿನಲ್ಲಿ ಯುವತಿ ಕರೆ ಮಾಡಿ ಕಂಪನಿಯ ಬಿ ಬ್ಲಾಕ್ನಲ್ಲಿ ಬಾಂಬ್ ಇದೆ ಎಂದು ಹೇಳಿದ್ದಳು.ಪೊಲೀಸರು ತಪಾಸಣೆ ವೇಳೆ ಯುವತಿ ಕರೆ ಮಾಡಿರುವುದು ಕನ್ಫರ್ಮ್ ಆಗಿದೆ. ಬೆಳಗಾವಿಯಲ್ಲಿ ಯುವತಿಯನ್ನು ವಶಕ್ಕೆ ಪಡೆಯಲು ಪೊಲೀಸರು ಸಿದ್ದತೆ ನಡೆಸಿದೆ.