ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಐಪಿಎಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆಗಳನ್ನು ಸೃಷ್ಟಿಸಿ ವಂಚಿಸುತ್ತಿದ್ದ ರಾಜಸ್ಥಾನ ಮೂಲದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅರ್ಬಾಜ್ ಖಾನ್ ಬಂಧಿತ ಆರೋಪಿಯಾಗಿದ್ದು, ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆಯನ್ನು ತೆರೆದು ಜನರನ್ನು ವಂಚಿಸುತ್ತಿದ್ದ.
ರೈತರೇ ಗಮನಿಸಿ.. ಕಡಿಮೆ ಬಂಡವಾಳ, ಅಧಿಕ ಲಾಭ! ಈ ಬೆಳೆಯಿಂದ ಲಕ್ಷಗಟ್ಟಲೆ ಲಾಭ ಪಡೆಯಬಹುದು!
ಕೇವಲ ಬೆಳಗಾವಿ ಮಾತ್ರವಲ್ಲದೇ ಗದಗ ಮತ್ತು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಹೆಸರಿನಲ್ಲೂ ನಕಲಿ ಖಾತೆಯನ್ನು ವಂಚಿಸಿದ್ದ.
ನಕಲಿ ಫೇಸ್ಬುಕ್ ಖಾತೆಯನ್ನು ತೆರೆದು ವಂಚಿಸುತ್ತಿರುವ ಮಾಹಿತಿ ತಿಳಿದ ಬೆನ್ನಲ್ಲೇ ಆತನ ವಿರುದ್ಧ ಬೆಳಗಾವಿ ಎಸ್ಪಿ ಎಫ್ಐಆರ್ ದಾಖಲಿಸಿದ್ದಾರೆ. ದಾಖಲಿಸಿದ ಬಳಿಕ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.