ಬೆಂಗಳೂರು:- ಯುವತಿಯರ ರೂಂಗೆ ನುಗ್ಗಿ ನಾನು ಕ್ರೈಂ ಬ್ರಾಂಚ್ ಆಫೀಸರ್ ಅಂತ ಕಿರುಕುಳ ನೀಡುತ್ತಿದ್ದ ಹೋಂ ಗಾರ್ಡ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ರಮೇಶ್ ಬಂಧಿತ ಆರೋಪಿ. ಹೋಂ ಗಾರ್ಡ್ ಆಗಿರುವ ಈತ ಕ್ರೈಂ ಬ್ರಾಂಚ್ ಪೊಲೀಸ್ ಅಧಿಕಾರಿಯ ಸೋಗಿನಲ್ಲಿ ಯುವತಿಯರಿಗೆ ಕಿರುಕುಳ ಕೊಡುತ್ತಿದ್ದ. ಕೇರಳದಿಂದ ಬೆಂಗಳೂರಿಗೆ ಬಂದು ಕಾಲೇಜೊಂದರಲ್ಲಿ 2ನೇ ವರ್ಷದ ಬಿಎಸ್ಸಿ ಓದುತ್ತಿದ್ದ ವಿದ್ಯಾರ್ಥಿನಿ ಮೂವರು ಸ್ನೇಹಿತೆಯರ ಜೊತೆ ರೂಮ್ ಮಾಡಿಕೊಂಡಿದ್ದಳು. ಜ.25ರಂದು ಊಟ ಮಾಡಿ ಮಲಗಿದ್ದಾಗ ಆರೋಪಿ ಬಾಗಿಲು ತಟ್ಟಿದ್ದ. ಬಾಗಿಲು ತೆಗೆದಾಗ ನಾನು ಪೊಲೀಸ್ ಅಂತ ಹೇಳಿ ಒಳಗಡೆ ಹೋಗಿದ್ದ.
ಆತ ಒಳಗೆ ಬರುತ್ತಿದ್ದಂತೆ ಯುವತಿ ಆಕೆಯ ಸ್ನೇಹಿತನಿಗೆ ಕರೆ ಮಾಡಿ ಪೊಲೀಸರು ಬಂದಿದ್ದಾರೆ ಎಂದು ತಿಳಿಸಿದ್ದಳು. ಆರೋಪಿ ಡೋರ್ ಲಾಕ್ ಮಾಡಿ, ಎಲ್ಲರ ಮೊಬೈಲ್ನ್ನು ಹೆದರಿಸಿ ಕಸಿದುಕೊಂಡಿದ್ದ. ಬಳಿಕ ಯುವತಿ ಕೈಯಲ್ಲಿದ್ದ ಹಾವಿನ ಟ್ಯಾಟೋ ನೋಡಿ ಅಶ್ಲಿಲವಾಗಿ ಮಾತನಾಡಿದ್ದ. ಅಲ್ಲದೇ ಯುವತಿ ಕರೆ ಮಾಡಿದ್ದಕ್ಕೆ ಬಂದಿದ್ದ ಆಕೆಯ ಸ್ನೇಹಿತರ ಮೊಬೈಲ್ ವಶಕ್ಕೆ ಪಡೆದು, ಯುವತಿರಿಗೆ ಮಂಡಿಕಾಲಿನಲ್ಲಿ ನಿಲ್ಲಿಸಿ ಟಾರ್ಚರ್ ನೀಡಿದ್ದ. 1:30 ಸುಮಾರಿಗೆ ಇನ್ನೊಬ್ಬ ಯುವಕ ಬಂದು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದ. ಬಳಿಕ ಆರೋಪಿ ಬಣ್ಣ ಬಯಲಾಗಿದೆ.
ಆರೋಪಿ ಕಳೆದ 6 ತಿಂಗಳಿನಿಂದ ಕ್ರೈಂ ಬ್ರಾಂಚ್ ಪೊಲೀಸ್ ಅಂತ ಹೇಳಿಕೊಂಡು ಯುವತಿಯರಿಗೆ ಹಾಗೂ ಆಕೆ ಗೆಳೆಯರಿಗೆ ಟಾರ್ಚರ್ ಕೊಡುತ್ತಿದ್ದ ಎಂದು ತನಿಖೆಯಲ್ಲಿ ತಿಳಿದು ಬಂದಿದೆ.