ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಕೌಟುಂಬಿಕ ಕಾರಣಕ್ಕೆ ಮನನೊಂದು ಮಡಿವಾಳ ಪೊಲೀಸ್ ಠಾಣೆ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪೊಲೀಸ್ ಕಾನ್ ಸ್ಟೇಬಲ್ ಮೃತದೇಹ ಪತ್ತೆಯಾಗಿದ್ದು ಕೌಟುಂಬಿಕ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಶಿವರಾಜ್ ಆತ್ಮಹತ್ಯೆ ಮಾಡಿಕೊಂಡಿರೋ ಸಿಬ್ಬಂದಿಯಾಗಿದ್ದು ಮಡಿವಾಳ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕೆಲಸ ಮಾಡ್ತಿದ್ದ ಕಳೆದ ಮೂರು ತಿಂಗಳ ಹಿಂದೆ ಮದುವೆಯಾಗಿದ್ದು ಅಣ್ಣನ ಮಗನ ಕುಟುಂಬಸ್ಥರಿಂದ ಕಿರುಕುಳ ಅಂತಾ ಆತ್ಮೀಯರ ಬಳಿ ಹೇಳಿಕೊಂಡಿದ್ದನು.
ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಡಿಸಿಎಂ ಡಿಕೆ ಹಾಕಿದ ಆ್ಯಕ್ಷನ್ ಪ್ಲ್ಯಾನ್ ಏನೇನು?
ತನ್ನ ಬಗ್ಗೆ ಕೆಟ್ಟದಾಗಿ ಮಾತಾಡ್ತಾರೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡ್ತಾರೆ ಅಂತಾ ಅಳಲು ತೋಡಿಕೊಂಡಿದ್ದ ಶಿವರಾಜು ಈ ವಿಚಾರಕ್ಕೆ ಸಾಕಷ್ಟು ನೊಂದಿದ್ದ ಎಂದು ಹೇಳಲಾಗುತ್ತಿದೆ
ಮಡಿವಾಳ ಠಾಣೆಯಲ್ಲಿ ಕೆಲಸ ಮಾಡ್ತಿದ್ದ ಶಿವರಾಜ್ ಇತ್ತೀಚೆಗೆ ನಾಪತ್ತೆಯಾಗಿದ್ದ ಇವತ್ತು ಜ್ಞಾನ ಭಾರತಿ ಠಾಣಾ ವ್ಯಾಪ್ತಿಯಲ್ಲಿ ಶವವಾಗಿ ಪತ್ತೆ.. ಘಟನಾ ಸ್ಥಳಕ್ಕೆ ಎಫ್ಎಸ್ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಶವವನ್ನ ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.