ಅನಾರೋಗ್ಯದಿಂದ ಬಳಲುತ್ತಿದ್ದ ಮಲಯಾಳಂ ಚಿತ್ರರಂಗದ ಖ್ಯಾತ ನಿರ್ಮಾಪಕ ಶಾಫಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಶಾಫಿ ಎಂದೇ ಖ್ಯಾತಿ ಘಳಿಸಿದ್ದ ರಶೀದ್ ಎಂ ಹೆಚ್ ಜನವರಿ 16ರಂದು ಪಾರ್ಶ್ವವಾಯುವಿಗೆ ಒಳಗಾಗಿ ಕೇರಳದ ಕೊಚ್ಚಿಯ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮಧ್ಯರಾತ್ರಿ 12.25ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿದೆ.
ಶಾಫಿ ಅವರ ಅಂತಿಮ ಸಂಸ್ಕಾರ ರವಿವಾರ ಸಂಜೆ 4 ಗಂಟೆಗೆ ಕಾಲೂರು ಮುಸ್ಲಿಂ ಜುಮಾ ಮಸೀದಿಯಲ್ಲಿ ಸಂಪ್ರದಾಯದಂತೆ ನೆರವೇರಿಸಲಾಯಿತು.