ಗದಗ: ಮೂವರು ಯಶ್ ಅಭಿಮಾನಿಗಳ ದಾರುಣ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಕಿಂಗ್ ಸ್ಟಾರ್ ಯಶ್ ಟೀಮ್ ಕಡೆಯಿಂದ ಪರಿಹಾರ ವಿತರಣೆ ಮಾಡಲಾಗಿದೆ. ಮೃತ ಯುವಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಚೆಕ್ ನೀಡಲಾಗಿದೆ.
ಹೌದು ನಟ ಯಶ್ ಅವರ ಸ್ನೇಹಿತರಾದ ಚೇತನ್ ಹಾಗೂ ರಾಕೇಶ್ ಅವರು ಇಂದು ದುರಂತ ಸಂಭವಿಸಿದ್ದ ಸೂರಣಗಿ ಗ್ರಾಮಕ್ಕೆ ಭೇಟಿ ನೀಡಿದ್ದರು. ಮನೆ ಮಕ್ಕಳನ್ನು ಕಳೆದುಕೊಂಡಿರುವ ಮೂರು ಕುಟುಂಬಗಳಿಗೆ ಸಾಂತ್ವನ ಹೇಳಿ, ಪರಿಹಾರ ಹಣದ ಚೆಕ್ ವಿತರಿಸಿದ್ದಾರೆ. ಪರಿಹಾರದ ಧನವಾಗಿ 5 ಲಕ್ಷ ರೂ. ನೀಡಲಾಗಿದೆ.