ಗದಗ:- ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ನೇಮಕ ಹಿನ್ನೆಲೆ ಗದಗನಲ್ಲಿ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.
ಗದಗ ನಗರದ ಹುಯಿಲಗೋಳ ನಾರಾಯಣರಾಯರ ವೃತ್ತದಲ್ಲಿ ವಿಜಯೋತ್ಸವ ಆಚರಣೆ ನಡೆದಿದೆ. ಮಿನಿ ರಾಜಾಹುಲಿ ಮುಂದಿನ ಮುಖ್ಯಮಂತ್ರಿ ಬಿ ವೈ ವಿಜಯೇಂದ್ರಗೆ ಜಯವಾಗಲಿ ಅಂತಾ ಘೋಷಣೆ ಕೂಗಿದ್ದಾರೆ. ಪಟಾಕಿ ಸಿಡಿಸಿ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.