ಹುಬ್ಬಳ್ಳಿ:- ಮಹದಾಯಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಪ್ರಹ್ಲಾದ್ ಜೋಶಿ ಬಳಿ ಅನ್ನದಾತರು ಮನವಿ ಮಾಡಿದ್ದಾರೆ.
ರಸ್ತೆ ಅಪಘಾತ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಐವರು ಸಾವು!
ಗೋವಾದ ಹೆಚ್ಚುವರಿ ವಿದ್ಯುತ್ ಮಾರ್ಗ ಯೋಜನೆಗೆ ರಾಜ್ಯದ ಕಾಡು ಒದಗಿಸುವ ಯೋಜನೆಗೆ ವಿರೋಧ ಇದೆ. ಹೀಗಿದ್ದರೂ ವನ್ಯಜೀವಿ ಮಂಡಳಿಯ ತೀರ್ಮಾನವು ರಾಜ್ಯಕ್ಕೆ ಕಹಿಯಾಗಿದ್ದರೆ, ಗೋವಾಕ್ಕೆ ಸಿಹಿಯಾಗಿದೆ. ಗೋವಾ ವಿದ್ಯುತ್ ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ಕೊಡಿಸಿದ್ರೆ, ಮಹದಾಯಿಯ ಕಳಸಾ ನಾಲಾ ತಿರುವು ಯೋಜನೆಗೆ ವನ್ಯಜೀವಿ ಅನುಮೋದನೆ ನೀಡಲು ರಾಷ್ಟ್ರೀಯ ವನ್ಯಜೀವಿ ಮಂಡಳಿ ಮತ್ತೆ ನಿರಾಕರಿಸಿದೆ. ಮಹದಾಯಿ ಯೋಜನೆಗೆ ವನ್ಯಜೀವಿ ಮಂಡಳಿ ಅನುಮತಿ ನಿರಾಕರಿಸಿದ್ದರಿಂದ ಹುಬ್ಬಳ್ಳಿಯಲ್ಲಿ ಪ್ರಹ್ಲಾದ್ ಜೋಶಿ ಹೊರ ಬರುತ್ತಿದ್ದಂತೆಯೇ ರೈತರು ಮನವಿ ಕೊಟ್ಟಿದ್ದಾರೆ.
ಗೋವಾ ರಾಜ್ಯಕ್ಕೆ ವಿದ್ಯುತ್ ಯೋಜನೆಗೆ ಅನುಮತಿ ನೀಡಲಾಗಿದೆ. ಆದ್ರೆ, ಕರ್ನಾಟಕ ಮಹದಾಯಿಗೆ ಅನುಮತಿ ನಿರಾಕರಿಸಲಾಗಿದೆ. ಹೀಗಾಗಿ ಯೋಜನೆಗೆ ಅನುಮತಿ ಕೊಡುವ ಕುರಿತು ಸ್ಪಷ್ಟ ನಿರ್ಧಾರ ಪ್ರಕಟಿಸಲು ಆಗ್ರಹಿಸಿದ್ದಾರೆ. ಈ ಕುರಿತು ಮಾತನಾಡಿದ ಜೋಶಿ, ‘ವನ್ಯಜೀವಿ ಮಂಡಳಿ ಅನುಮತಿ ನಿರಾಕರಿಸಿಲ್ಲ. ರಾಷ್ಟ್ರೀಯ ಹುಲಿ ಪ್ರಾಧಿಕಾರ ಯಾವುದೇ ವರದಿ ಕೊಟ್ಟಿಲ್ಲ. ಹೀಗಾಗಿ ವನ್ಯಜೀವಿ ಮಂಡಳಿ ಯಾವುದೇ ನಿರ್ಧಾಕ್ಕೆ ಬಂದಿಲ್ಲ ಎಂದು ರೈತರನ್ನ ಸಮಜಾಯಿಷಿದ್ದಾರೆ.