ಮಂಡ್ಯ: ವಕ್ಫ್ ಬೋರ್ಡ್ ಹೆಸರಿನಲ್ಲಿ ರೈತರ ಜಮೀನುಗಳನ್ನು ನುಂಗಲಾಗುತ್ತದೆ. ಆದರೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್ ಅಶೋಕ್ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಕೆಂಗೇರಿಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಇದೇ ನೆಪವೊಡ್ಡಿ ಸ್ವಾಮೀಜಿಯವರನ್ನು ಮುಟ್ಟಿದರೆ ಹುಷಾರ್, ಎಂದು ಎಚ್ಚರಿಕೆ ನೀಡಿದ ಅವರು, ವಕ್ಫ್ ಬೋರ್ಡ್ ಹೆಸರಿನಲ್ಲಿ ರೈತರ ಜಮೀನುಗಳನ್ನು ನುಂಗಲಾಗುತ್ತದೆ. ಆದರೆ,ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆಕ್ಷೇಪಿಸಿದರು.
ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ!
ಇನ್ನೂ ವಿಧಾನಸೌಧದ ಮೊಗಸಾಲೆಯಲ್ಲೇ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದ ಸಂಬಂಧ ಈವರೆಗೆ ಏಕೆ ಪ್ರಕರಣ ದಾಖಲಿಸಿಲ್ಲ. ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರನ್ನು ಸಚಿವ ಜಮೀರ್ ಅಹಮ್ಮದ್ ಅವರು ಕರಿಯ ಎಂದು ನಿಂದಿಸಿದರು. ಇದರ ವಿರುದ್ಧವೂ ಕ್ರಮ ಆಗಲಿಲ್ಲ. ಆದರೆ, ಮುಸ್ಲಿಮರನ್ನು ಓಲೈಸುವ ಕೆಲಸವನ್ನು ಸರಕಾರ ಮಾತ್ರ ಚೆನ್ನಾಗಿ ಮಾಡುತ್ತಿದೆ ಎಂದು ಆರೋಪಿಸಿದರು.