ದಾವಣಗೆರೆ: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ದಾವಣಗೆರೆಯ ಜಯದೇವ ವೃತ್ತದಲ್ಲಿ ರೈತರ ಪ್ರತಿಭಟನೆ ನಡೆಸಿದರು. ಬರಗಾಲ ಬೆಳೆ ನಷ್ಟ ಪರಿಹಾರ ನೀಡಬೇಕು, ಅಕ್ರಮ- ಸಕ್ರಮ ವಿದ್ಯುತ್ ಯೋಜನೆ ಮುಂದುವರಿಸಬೇಕು, ಬಗರ್ ಹುಕುಂ ಸಾಗುವಳಿ ಪತ್ರ ವಿತರಣೆ ಮಾಡಬೇಕು ಮತ್ತು ಬಲವಂತದ ಸಾಲ ವಸೂಲಾತಿ ನಿಲ್ಲಿಸುವಂತೆ ಒತ್ತಾಯ ಮಾಡಿದರು.
ಜಯದೇವ ವೃತ್ತದಿಂದ ಉಪ ವಿಭಾಗಾಧಿಕಾರಿಗಳ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದು, ಸರ್ಕಾರದ ವಿರುದ್ಧ ಘೋಷಣೆಗಳನ್ನ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಎಸಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಕೆ ಮಾಡಿದರು.