ಗದಗ: ಗದಗ ಜಿಲ್ಲೆಯಲ್ಲಿ ಬೆಳೆ ವಿಮೆಯಲ್ಲಿ ಭಾರೀ ಹಗರಣ ನಡೆದಿರುವ ಆರೋಪ ಕೇಳಿ ಬಂದಿದೆ. ಸ್ಥಳೀಯ ಗಂಡಾಂತರ ಪರಿಹಾರದಲ್ಲಿ ತಾರತಮ್ಯ ವಿರೋಧಿಸಿ, ರೈತರು ಪ್ರತಿಭಟನೆಗಿಳಿದಿದ್ದಾರೆ.
ಗದಗ ತಾಲೂಕಿನ ಮುಳಗುಂದ ಪಟ್ಟಣದ ಗ್ರಾಮ ಆಡಳಿತ ಅಧಿಕಾರಿಗಳ ಕಾರ್ಯಾಲಯದ ಮುಂದೆ ನಡು ರಸ್ತೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಪ್ರತಿಭಟನೆ ನಡೆಸಲಾಗಿದ್ದು, ಓರಿಯಂಟಲ್ ಇನ್ಶೂರೆನ್ಸ್ ಕಂಪನಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಏಜೆಂಟರ ಹಾವಳಿ ಮಿತಿಮೀರಿದ್ದು ಕ್ರಮ ಕೈಗೊಳ್ಳಬೇಕು. ಬೆಳೆ ವಿಮೆ ಹಗರಣ ನ್ಯಾಯಾಂಗ ತನಿಖೆ ಆಗಬೇಕು, ಸದನದಲ್ಲಿ ಚರ್ಚೆ ಆಗಬೇಕು. ಬೆಳೆ ವಿಮೆ ಹಗರಣದಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಶಾಮೀಲಾಗಿದ್ದಾರೆಂದು ಆರೋಪಿಸಿದರು. ಏಜೆಂಟರ ಮೂಲಕ ಹಣ ತುಂಬಿದ್ರೆ ಮಾತ್ರ ಪರಿಹಾರ ಬರತ್ತೆ, ರೈತರು ಸ್ವತಃ ಬೆಳೆ ವಿಮೆ ಪ್ರೀಮಿಯಂ ತುಂಬಿದ್ರೆ ಬರಲ್ಲ. ಇವರು 50:50 ಒಪ್ಪಂದದ ಮೂಲಕ ರೈತರ ಸುಲಿಗೆ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ರು.